- +91 73497 60202
- [email protected]
- November 25, 2024 7:20 PM
ನ್ಯೂಸ್ ನಾಟೌಟ್ : ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ. ಕೇರಳದಲ್ಲಿ (Kerala) ಕೊರೊನಾ ರೂಪಾಂತರಿ JN.1 ಕೇಸ್ (Corona JN.1 Case) ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಮಂಗಳವಾರವೇ (ಡಿ.19) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ವೈದ್ಯರು ತಿಳಿಸಿದ್ದಾರೆ. ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ತಿಳಿದುಬಂದಿದ್ದು, ಜ್ವರದಿಂದಾಗಿ ಆಸ್ಪತ್ರೆಗೆ (Mandya Hospital) ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದೆ. ಈ ಕುರಿತು ಮಾತನಾಡಿರುವ ಮಂಡ್ಯದ ಜಿಲ್ಲಾ ಆರೋಗ್ಯಾಧಿಕಾರಿ ಮೋಹನ್, ಮದ್ದೂರಿನ ವ್ಯಕ್ತಿ ಮಿಮ್ಸ್ ಆಸ್ಪತ್ರೆಗೆ ಆಪರೇಷನ್‌ಗೆ ಬಂದಿದ್ದರು. ಆತನಿಗೆ ಕೊರೊನಾದ ಲಕ್ಷಣಗಳೇನು ಇರಲಿಲ್ಲ. ನಿಯಮದ ಪ್ರಕಾರ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು, ಆಗ ಪಾಸಿಟಿವ್ ಬಂದಿದೆ ಎಂದಿದ್ದಾರೆ. ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಕೇಸ್ ಆಗಿದೆ. ಜೊತೆಗೆ 25% ಗಿಂತ ಅಧಿಕ ಪ್ರಮಾಣದಲ್ಲಿ ಅವರ ಸ್ಕೋರಿಂಗ್ ಹೆಚ್ಚಿರುವ ಕಾರಣ ILI ಸ್ಯಾರಿ ಕೇಸ್ ಸಂಬಂಧ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳಿಸಿಲ್ಲ. ಸದ್ಯ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕರ್ನಾಟಕಕ್ಕೆ ಶೀಘ್ರದಲ್ಲೇ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ವರದಿ ತಿಳಿಸಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ