ನ್ಯೂಸ್ ನಾಟೌಟ್: ಪ್ರಕೃತಿಯ ಮಡಿಲಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸಿ ಸುಳ್ಯದಂತಹ ಸಣ್ಣ ನಗರದಲ್ಲಿ ಗುರುಕುಲ ಮಾದರಿಯಲ್ಲಿ ಕನ್ನಡ ಶಾಲೆಯನ್ನು ಕಟ್ಟಿದ ಸಾಧಕ ಡಾ. ಚಂದ್ರಶೇಖರ ದಾಮ್ಲೆಯವರನ್ನು ಶುಕ್ರವಾರ ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು.
ಉದ್ಯಾನನಗರಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿರುವ ಝೆನ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ನಿಸರ್ಗ ವಿದ್ಯಾರ್ಥಿ ನಿಕೇತನ ಶಾಲೆಯಲ್ಲಿ ವಿಶೇಷ ಉಪನ್ಯಾಸಕರಾಗಿ ತೆರಳಿದ್ದ ದಾಮ್ಲೆಯವರು ಅಲ್ಲಿನ ಶಿಕ್ಷಕಿಯರಿಗೆ ತರಬೇತಿ ನೀಡಿದರು. ಮಕ್ಕಳನ್ನು ಬೆಳೆಸುವ ಬಗ್ಗೆ ಅಮೂಲ್ಯ ಸಲಹೆಗಳನ್ನು ನೀಡಿದರು. ಮಾತ್ರವಲ್ಲ ಶಿಕ್ಷಣದ ಮೌಲ್ಯಗಳನ್ನು ಉಳಿಸುವಲ್ಲಿ ಹೆತ್ತವರ ಪಾತ್ರವೂ ಮುಖ್ಯವಾಗಿರುತ್ತದೆ ಎಂದು ದಾಮ್ಲೆಯವರು ತಿಳಿಸಿದರು. ಝೆನ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಪ್ರಶಾಂತಿ ರಾವ್ ಉಬರಡ್ಕ ವಂದಿಸಿದರು.