ನ್ಯೂಸ್ ನಾಟೌಟ್ : ಆಧುನಿಕ ಸುಳ್ಯದ ನಿರ್ಮಾತೃ ,ಅಕ್ಷರ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 95 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಎಂ. ದೀಪ ಬೆಳಗಿ ಡಾ. ಕೆವಿಜಿ ಸಾಧನೆ ಹಾಗೂ ಅವರ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು. ಎನ್ನೆಂಸಿಯ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ ಮತ್ತು ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು , ಪುಷ್ಪ ನಮನ ಸಲ್ಲಿಸಿದರು.