ನ್ಯೂಸ್ ನಾಟೌಟ್: ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶ (Telangana Election Results) ಪ್ರಕಟವಾಗುತ್ತಿದ್ದು, ಕಾಂಗ್ರೆಸ್ ಮತ್ತು ಬಿಆರ್ಎಸ್ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ.
ಫಲಿತಾಂಶ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar), ಸಚಿವ ಜಮೀರ್ ಅಹ್ಮದ್ ಖಾನ್ ಹೈದರಾಬಾದ್ನಲ್ಲಿಯೇ ಉಳಿದುಕೊಂಡಿದ್ದಾರೆ. ಚುನಾವಣೆ ಫಲಿತಾಂಶದಲ್ಲಿ ಮುನ್ನಡೆಯ ಅಂಕಿ ಸಂಖ್ಯೆಗಳು ಕ್ಷಣ ಕ್ಷಣಕ್ಕೂ ಕುತೂಹಲ ಸೃಷ್ಟಿಸುತ್ತಿದೆ.
ಈ ಹಿನ್ನೆಲೆ ಹೈದರಾಬಾದ್ ಕಾಂಗ್ರೆಸ್ ವಾರ್ ರೂಮ್ನಲ್ಲಿ ಡಿಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆಯುತ್ತಿದೆ ಎನ್ನಲಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸುಳಿವು ನೀಡಿವೆ ಎನ್ನಲಾಗಿದೆ.
ಎಲ್ಲಾ ಗೆದ್ದ ಅಭ್ಯರ್ಥಿಗಳನ್ನು ಕೂಡಲೇ ಹೈದರಾಬಾರ್ಗೆ ಬರುವ ಸೂಚನೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರಂತೆ. ಎಲ್ಲರನ್ನೂ ಒಟ್ಟುಗೂಡಿಸಿ ನಂತರ ನೂತನ ಶಾಸಕರನ್ನು ಅಗತ್ಯ ಬಿದ್ದರೆ ಸರ್ಕಾರ ರಚನೆವರೆಗೆ ಕರ್ನಾಟಕಕ್ಕೆ ಕರೆ ತರುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ ಎನ್ನಲಾಗಿದೆ.