ನ್ಯೂಸ್ ನಾಟೌಟ್ : ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಕೀಳಾಗಿ ಮಾತನಾಡಿ ನೆರೆದಿದ್ದ ಜನರ ಮುಂದೆ ಚಪ್ಪಾಳೆ ಗಿಟ್ಟಿಸಿಕೊಂಡ ಪಾಕಿಸ್ತಾನದ ಸೇನಾಧಿಕಾರಿಯೊಬ್ಬನ ವಿಡಿಯೋ ವೈರಲ್ ಆಗುತ್ತಿದೆ.
ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಒಂದಷ್ಟು ಜನರ ಗುಂಪಿನ ನಡುವೆ “ಭಾರತವನ್ನು ವಶಪಡಿಸಿಕೊಳ್ಳುತ್ತೇವೆ, ಪ್ರಧಾನಿ ನರೇಂದ್ರ ಮೋದಿಯನ್ನು (PM Narendra Modi) ಬಂಧಿಸುತ್ತೇವೆ ಎಂದೆಲ್ಲಾ ಹೇಳಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ವಿಡಿಯೋದಲ್ಲಿ ಆತನ ದ್ವೇಷದ ಭಾಷಣ ದಾಖಲಾಗಿದೆ. ಭಾರತದ ಆಡಳಿತಗಾರ ಮೋದಿಯನ್ನು ನಾವು ಗುಲಾಮರನ್ನಾಗಿ ಮಾಡಿಕೊಳ್ಳುತ್ತೇವೆ. ಮೋದಿ ಕೈಗೆ ಸರಪಳಿ ಹಾಕಿ ಬಂಧಿಸುವುದನ್ನು ನಮ್ಮನ್ನು ಬಿಟ್ಟು ಬೇರೆ ಯಾರು ಬಯಸುತ್ತಾರೆ ಎಂದು ಜನರ ಬಳಿ ಕೇಳಿದ್ದಾನೆ. ನಂತರ ಪ್ಯಾಲೆಸ್ತೀನ್ ಅನ್ನು ಇಸ್ರೇಲ್ನಿಂದ ಬಿಡಿಸಿ ಸ್ವಾತಂತ್ರ್ಯ ಕೊಡಿಸುತ್ತೇವೆ ಎಂದು ಜಂಬ ಕೊಚ್ಚಿಕೊಂಡಿದ್ದಾರೆ.
“ತಿನ್ನಲು ಏನೂ ಸಿಗದೇ ಅಕ್ಕ ಪಕ್ಕದ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದರೂ ಧಿಮಾಕಿನ ಮಾತಿಗೆ ಏನೂ ಕಡಿಮೆ ಇಲ್ಲ. ನಮ್ಮ ದೇಶಕ್ಕೆ ಬರುವ ಕನಸು ಕಾಣುವ ಮೊದಲು ನಿಮ್ಮ ದೇಶದ ಪ್ರಜೆಗಳಿಗೆ ಹೊಟ್ಟೆ ತುಂಬಾ ಊಟ ಹಾಕು” ಎಂದು ಕೆಲವರು ತರಾಟೆಗೆ ತೆಗೆದುಕೊಂಡಿದ್ದಾರೆ. “ಜನಗಳ ಮುಂದೆ ಭಾರತದ ಪ್ರಧಾನಿಯನ್ನು ಬಂಧಿಸುತ್ತೇವೆ ಎಂದು ಜಂಭ ಕೊಚ್ಚಿಕೊಳ್ಳುವ ಪಾಕ್ ಸೈನ್ಯದವರು ಕೊನೆಗೆ ಆ ದೇಶದ ಪ್ರಧಾನಿಗಳನ್ನೇ ಬಂಧಿಸುತ್ತಾರೆ. ಹಲವು ದಶಕಗಳಿಂದ ಇದು ನಡೆಯುತ್ತಲೇ ಇದೆ. ಇಮ್ರಾನ್ ಖಾನ್, ಪರ್ವೇಜ್ ಮುಷರ್ರಫ್, ನವಾಜ್ ಷರೀಫ್ ಅವರ ಗತಿ ನೋಡಿ” ಎಂದು ಇನ್ನು ಹಲವರು ಕಾಮೆಂಟ್ ಮಾಡಿದ್ದಾರೆ.