ನ್ಯೂಸ್ ನಾಟೌಟ್ : ಸ್ಯಾಂಡಲ್ವುಡ್ ನಿಂದ ಬಾಲಿವುಡ್ಗೆ ಪ್ರವೇಶಿಸಿ ಖ್ಯಾತಿ ಗಳಿಸಿದ್ದಲ್ಲದೆ ರಾಜಕೀಯದಲ್ಲೂ ಹೆಸರು ಮಾಡಿದ್ದ ನಟಿ ಜಯಪ್ರದಾ ನಾಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಶನಿವಾರ(ಡಿ.30) ಬೆಳಿಗ್ಗೆ ಬೆಳಗ್ಗೆಯಿಂದ ನಾಪತ್ತೆಯಾದ ಬಗ್ಗೆ ಸುದ್ದಿಯಾಗಿದೆ.
ನಟಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿತ್ತು. 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣವನ್ನು ಎದುರಿಸುತ್ತಿರುವ ನಟಿ ಈ ಪ್ರಕರಣದಲ್ಲಿ ರಾಂಪುರ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ಬಿಜೆಪಿ ಪರ ಪ್ರಚಾರಕ್ಕೆ ಬಂದಿದ್ದ ಜಯಪ್ರದಾ, ಚುನಾವಣಾ ನಿಯಮ ಜಾರಿಯಲ್ಲಿದ್ದರೂ ರಸ್ತೆಯಲ್ಲಿ ಪ್ರಚಾರಕಾರ್ಯ ಆರಂಭಿಸಿದ್ದರು. ಇದರಿಂದಾಗಿ ಅವರ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.
ಇನ್ನೂ ರಾಂಪುರ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ಸಾಕಷ್ಟು ಬಾರಿ ಮನವಿ ಮಾಡಿದರೂ ನ್ಯಾಯಾಲಯಕ್ಕೆ ಹಾಜರಾಗಿಲ್ಲ ಎನ್ನಲಾಗಿದೆ. ಇದರಿಂದ ಕುಪಿತಗೊಂಡ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಕಳೆದ ತಿಂಗಳು ನ.8 ರಂದು ಮತ್ತೆ ವಿಚಾರಣೆಗೆ ಬಂದಿತ್ತು. ನವೆಂಬರ್ 17ರಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಇಷ್ಟು ದಿನ ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದರಿಂದ ಸಿಟ್ಟಿಗೆದ್ದ ನ್ಯಾಯಾಲಯ ಜಯಪ್ರದಾರನ್ನು ಜನವರಿ 10ರೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಂಪುರ ಪೊಲೀಸರಿಗೆ ಆದೇಶಿಸಿದೆ ಎಂದು ವರದಿ ತಿಳಿಸಿದೆ.
ರಾಂಪುರ ನ್ಯಾಯಾಲಯದ ಆದೇಶದೊಂದಿಗೆ ಪೊಲೀಸರು ಜಯಪ್ರದಾ ಮನೆಗೆ ಹೋದಾಗ, ಅವರು ಅಲ್ಲಿ ಇರಲಿಲ್ಲ. ಇದರಿಂದಾಗಿ ನಟಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಲ್ಲದೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಜಯಪ್ರದಾ ಪತ್ತೆಗೆ ಯುಪಿ ಪೊಲೀಸರು ದೆಹಲಿ ಪೊಲೀಸರ ಸಹಾಯ ಪಡೆಯುತ್ತಿದ್ದಾರೆ ಎನ್ನಲಾಗಿದೆ.
Follow us for more updates:
FB PAGE : https://www.facebook.com/NewsNotOut2023
Insta : https://www.instagram.com/newsnotout/
Tweet : https://twitter.com/News_Not_Out
YouTube : https://www.youtube.com/@newsnotout8209
Koo app: https://www.kooapp.com/profile/NewsNotOut
Website : https://newsnotout.com/