ನ್ಯೂಸ್ ನಾಟೌಟ್ : ಟೀ ಬೇಕಾ ಟೀ.. ಹೊಟ್ಟೆ ತುಂಬಿಸಿಕೊಳ್ಳಲು ಬನ್ನಿ ತಟ್ಟೆ ಇಡ್ಲಿ ಸಿಗುತ್ತೆ ಎಂದು ಬೀದಿ ಬದಿಯಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ತರಗತಿಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕಾದ ಉಪನ್ಯಾಸಕರು ಬೀದಿಗೆ ಬಂದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅತಿಥಿ ಉಪನ್ಯಾಸಕರು, ವಿಭಿನ್ನವಾಗಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಅತಿಥಿ ಉಪನ್ಯಾಸಕರ ಖಾಯಂಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಸರ್ಕಾರದ ಗಮನ ಸೆಳೆಯುವ ಸಲುವಾಗಿ ಕಡ್ಲೆಗಿಡ, ಟೀ ಮಾರಾಟ ಮಾಡಿ, ತಟ್ಟೆ ಇಡ್ಲಿ ಮಾರಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.