ಕೇರಳದಲ್ಲಿ ಒಂದೇ ದಿನ 300 ಸಕ್ರಿಯ ಕೋವಿಡ್ ಪ್ರಕರಣ ಪತ್ತೆಯಾಯ್ತಾ..? ಮಂಗಳೂರಿನಲ್ಲೂ ಕೋವಿಡ್ ಪ್ತತೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್ : ಡಿಸೆಂಬರ್ ತಿಂಗಳ ಮಧ್ಯಭಾಗದಿಂದ ಕೋವಿಡ್​​ ಪ್ರಕರಣಗಳ ಸಂಖ್ಯೆ ಮತ್ತು ಕೋವಿಡ್ ರೂಪಾಂತರಿ ಜೆಎನ್​.1 ಪ್ರಕರಣಗಳಲ್ಲೂ ಏರಿಕೆ ಕಂಡಿದೆ. ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು ಆತಂಕ ಹೆಚ್ಚಿಸಿದೆ. ಡಿಸೆಂಬರ್​ 20ರಂದು ಒಟ್ಟು 300 ಹೊಸ ಕೋವಿಡ್​​ ಪ್ರಕರಣಗಳು ದಾಖಲಾಗಿದ್ದು, 3 ಕೊನೆಯುಸಿರೆಳೆದ ಘಟನೆ ಕೇರಳದಲ್ಲಿ ನಡೆದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿಯ ಪ್ರಕಾರ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಆಗಿದೆ ಎಂದು ವರದಿ ತಿಳಿಸಿದೆ. ಕೇರಳದಲ್ಲಿ ಕೋವಿಡ್​ ಉಲ್ಬಣ ಆಗುತ್ತಿರುವ ಕುರಿತು ಮಾತನಾಡಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್​​, ಸೋಂಕಿನ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಇದರ ನಿರ್ವಹಣೆಗೆ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಮದು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ದಾಖಲಾಗುತ್ತಿರುವ ಬಹುತೇಕ ಕೋವಿಡ್​ ಪ್ರಕರಣದಲ್ಲಿ ಅತಿ ಹೆಚ್ಚು ಪ್ರಕರಣಗಳು ಕೇರಳ, ಕರ್ನಾಟಕ ಮತ್ತು ಒಡಿಸ್ಸಾದಲ್ಲಿ ದಾಖಲಾಗುತ್ತಿದೆ. ಮಂಗಳೂರಿನಲ್ಲಿ ವೃದ್ಧನಿಗೆ ಕೋವಿಡ್​ ಪಾಸಿಟಿವ್ ಪತ್ತೆಯಾಗಿದ್ದು, 82 ವರ್ಷದ ವೃದ್ಧನಲ್ಲಿ ಕೋವಿಡ್​ ಪಾಸಿಟಿವ್​ ಕಂಡು ಬಂದಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವೃದ್ಧ ಮೂಲತಃ ಉಡುಪಿಯವರಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದೆ.