ನ್ಯೂಸ್ ನಾಟೌಟ್: ‘ರಾಜಕೀಯ ಪಕ್ಷ ಬದಲಾದಂತೆ ಹಿಂದೂ ಹುಲಿಯ ವೇಷವೂ ಬದಲಾಗುತ್ತದೆ! ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ’ ಎಂದು ಕೆಪಿಸಿಸಿ ಮಾಡಿದ ಟ್ವೀಟ್’X’ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯತ್ನಾಳ್ ಸಿಎಂ ಸಿದ್ದರಾಮಯ್ಯ ಭಯೋತ್ಪಾದಕ ಸಂಘಟನೆಯ ನಂಡಿರುವವನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಬೆನ್ನಲ್ಲೇ ಯತ್ನಾಳ್ ಗೆ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.
ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿದ್ದು, ಮೌಲ್ವಿ ತನ್ವೀರ್ ಮನೆಗೆ ಭೇಟಿ ನೀಡಿದ್ದು ಯತ್ನಾಳ್ ತನ್ವೀರ್ ಹಶ್ಮಿ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದರು.
ಸದ್ಯ ರಾಜ್ಯದಲ್ಲಿ ಈ ವಿಚಾರ ದೊಡ್ಡ ಚರ್ಚೆಯಾಗುತ್ತಿದ್ದು, ಈ ನಡುವೆ ಕಾಂಗ್ರೆಸ್ ಬಿಜೆಪಿ ಹಾಗೂ ಶಾಸಕ ಯತ್ನಾಳ್ ಟ್ವೀಟ್ ‘x’ ನಲ್ಲಿ ವಾರ್ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮುಸ್ಲಿಂ ಮೌಲ್ವಿ ಮನೆಗೆ ಭೇಟಿ ನೀಡಿದ ವಿಡಿಯೋ ಹರಿಬಿಟ್ಟ ಯತ್ನಾಳ್ ಗೆ ಕಾಂಗ್ರೆಸ್, ಯತ್ನಾಳ್ ಮುಸ್ಲಿಂ ಟೋಪಿ ಹಾಕಿಕೊಂಡಿರುವ ಫೋಟೋ ಹಾಕಿ ತಿರುಗೇಟು ನೀಡಿದೆ.
ಶನಿವಾರ ಸಂಜೆ ಟ್ವೀಟ್ ಮಾಡಿರುವ ಕೆಪಿಸಿಸಿ, ” ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ. ಮುಸ್ಲಿಮರೊಂದಿಗೆ ಬದುಕು. ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ. ಯತ್ನಾಳ್ ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ! ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆಯಲಾಗಿದೆ.