ನ್ಯೂಸ್ ನಾಟೌಟ್ : ಜಗತ್ತಿನ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯನ್ನು ಫೋರ್ಬ್ಸ್ ರಿಲೀಸ್ ಮಾಡಿದ್ದು(Forbes Most powerful women list), ಈ ಲಿಸ್ಟ್ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) 32ನೇ ಸ್ಥಾನದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.
ನಿರ್ಮಲಾ ಸೀತಾರಾಮನ್ ಜತೆಗೇ ಭಾರತೀಯ ಮಹಿಳೆಯರಾದ ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ರೋಶ್ನಿ ನಾದರ್ ಮಲ್ಹೋತ್ರಾ(Roshni Nadar Malhotra) ಅವರು 60, ಸ್ಟಿಲ್ ಅಥಾರಿಟಿ ಆಫ್ ಇಂಡಿಯಾ ಅಧ್ಯಕ್ಷೆ ಸೋಮಾ ಮೊಂಡಲ್(Soma Mondal) 70, ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ (Kiran Mazumdar-Shaw) 76ನೇ ಸ್ಥಾನದಲ್ಲಿದ್ದಾರೆ ಎನ್ನಲಾಗಿದೆ.
ಯುರೋಪಿಯನ್ ಕಮಿಷನ್ ಮುಖ್ಯಸ್ಥೆ ಉರ್ಸುಲಾ ವಾನ್ ಡೆರ್ ಲೇಯೆನ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಮುಖ್ಯಸ್ಥ ಕ್ರಿಸ್ಟಿನ್ ಲಗಾರ್ಡೆ ಎರಡು ಮತ್ತು ಅಮೆರಿಕ ಉಪಾಧ್ಯಕ್ಷ ಕಮಲ್ ಹ್ಯಾರಿಸ್ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.
2019ರಿಂದ ನಿರ್ಮಲಾ ಸೀತಾರಾಮನ್ ದೇಶದ ಮೊದಲ ಪೂರ್ಣ ಪ್ರಮಾಣದ ಮಹಿಳಾ ವಿತ್ತ ಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾರ್ಪೊರೇಟ್ ವ್ಯವಹಾರಗಳ ಇಲಾಖೆಯ ನೇತೃತ್ವವನ್ನು ಕೂಡ ಹೊಂದಿದ್ದಾರೆ.
ರಾಜಕೀಯವನ್ನು ಸೇರುವ ಮುಂಚೆ ಇಂಗ್ಲೆಂಡ್ನ ಅಗ್ರಿಕಲ್ಚರ್ ಎಂಜಿನಿಯರ್ ಅಸೋಶಿಯೇಷನ್ ಮತ್ತು ಬಿಬಿಸಿ ವರ್ಲ್ಡ್ ಸರ್ವೀಸ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ಫೋರ್ಬ್ಸ್ ಹೇಳಿದೆ. ಸಚಿವೆಯಾಗುವ ಮುಂಚೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕೂಡ ಆಗಿದ್ದರು ಎನ್ನಲಾಗಿದೆ.