ನ್ಯೂಸ್ ನಾಟೌಟ್ : ಮೊನ್ನೆಯಷ್ಟೇ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಭಾರಿ ಚರ್ಚೆಗಳು ನಡೆದಿದ್ದವು.ಹಿಂದೂ ಸಂಘಟನೆ ಕಾರ್ಯಕರ್ತರು ಈ ಬಗ್ಗೆ ಭಾರಿ ಆಕ್ರೋಶ ಹೊರಹಾಕಿದ್ದರು.ಈ ಬೆನ್ನಲ್ಲೇ ಇದೀಗ ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿಗೊಳಿಸಲಾಗಿದೆ.ಗಡಿಪಾರು ಯಾಕೆ ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ ಆದೇಶದಲ್ಲಿ ಇಂತಹದ್ದೊಂದು ಪ್ರಸ್ತಾವನೆಯಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ ನೋಟಿಸ್ ಜಾರಿಗೊಳಿಸಲಾಗಿದೆ.ಪ್ರವೀಶ್ ಕುಮಾರ್ ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿದ್ದು,ಹಿಂದೂ ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತ.
ಎರಡು ಪ್ರಕರಣದಲ್ಲಿ ಪ್ರವೀಶ್ ಅವರು ಆರೋಪಿಯಾಗಿದ್ದರು.ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.ಪೊಲೀಸ್ ನಡೆಗೆ ಹಿಂದೂ ಸಂಘಟನೆಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸಿವೆ.