ನ್ಯೂಸ್ ನಾಟೌಟ್: ಇಂದು ಕರಾವಳಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಈ ವ್ಯತ್ಯಾಸಗಳಾಗುತ್ತಿದ್ದು, ಹವಾಮಾನ ವೈಪರೀತ್ಯವಾಗಲಿದೆ ಎಂದಿದೆ.ಡಿಸೆಂಬರ್ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಡಿಸೆಂಬರ್ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಈ ಹಿನ್ನೆಲೆ ಡಿಸೆಂಬರ್ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.