ನ್ಯೂಸ್ ನಾಟೌಟ್: ಖ್ಯಾತ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಸುಳ್ಯ ತಾಲೂಕಿನ ಸಂಪಾಜೆಯ ನಿವಾಸಿಯಾಗಿರುವ ಮೋಹನ್ ನಾಯಕ್ ಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮೋಹನ್ ನಾಯಕ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಅವರನ್ನು ಒಂದು ಲಕ್ಷ ಶ್ಯುರಿಟಿ ಕೊಟ್ಟು ಜಾಮೀನು ಪಡೆದುಕೊಳ್ಳುವುದಕ್ಕೆ ಒಪ್ಪಿಗೆ ನೀಡಿದೆ. ಮೋಹನ್ ನಾಯಕ್ ಮೂಲತಃ ಪುತ್ತೂರಿನ ಚಿಕ್ಕಮುಡ್ನೂರು ಕೆಮ್ಮಾಯಿನವರು. 2017 ಸೆ.5ರಂದು ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು. ಹತ್ಯೆ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳನ್ನು ಬಂಧಿಸಲಾಗಿತ್ತು. 1200 ಪುರಾವೆ ಹಾಗೂ 438 ಸಾಕ್ಷ್ಯ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿದ 45 ದಿನಗಳ ಬಳಕ ಆರೋಪಿ ಮೋಹನ್ ನಾಯಕ್ ಅವರಿಗೆ ಜಾಮೀನು ದೊರಕಿದೆ ಅನ್ನೋದು ವಿಶೇಷ.