ನ್ಯೂಸ್ ನಾಟೌಟ್ : ಲೋಕಸಭೆಯ (Lok Sabha) ಮೇಲೆ ದಾಳಿ ನಡೆಸಿದ್ದ ಮೈಸೂರು (Mysuru) ಮೂಲದ ಮನೋರಂಜನ್ (Manoranjan) ಮೂರು ಬಾರಿ ಸಂಸದ ಪ್ರತಾಪ್ ಸಿಂಹ (Pratap Simha) ಕಚೇರಿಯಿಂದ ಪಾಸ್ (Pass) ಪಡೆದಿದ್ದ ಎಮದು ತನಿಖೆಯಿಂದ ಬಯಲಾಗಿದೆ.
ಒಂದು ಪಾಸ್ನಲ್ಲಿ ಇಬ್ಬರು ಸಂಸತ್ ಪ್ರವೇಶ ಮಾಡಲು ಅವಕಾಶವಿದೆ. ಹೀಗಾಗಿ ಸಾಗರ್ ಹೆಸರಲ್ಲಿ ಪಾಸ್ ಕೊಡಿ ಎಂದು ಮಂಗಳವಾರ ಸಂಜೆ ಪಾಸ್ ಪಡೆದುಕೊಂಡಿದ್ದ. ಅದರಂತೆ ಮನೋರಂಜನ್ ಹಾಗೂ ಸಾಗರ್ ಶರ್ಮ ಸಂಸತ್ ಪ್ರವೇಶ ಮಾಡಿದ್ದರು.
ಕಳೆದ ಅಧಿವೇಶನದ ಸಮಯದಲ್ಲಿ ಹೊಸ ಸಂಸತ್ ವೀಕ್ಷಣೆ ನೆಪದಲ್ಲಿ ಎರಡು ಬಾರಿ ಮನೋರಂಜನ್ ಪಾಸ್ ಪಡೆದಿದ್ದ. ಪಾಸ್ ಪಡೆದು ವೀಕ್ಷಕರ ಗ್ಯಾಲರಿಯವರೆಗೂ ಇರುವ ಭದ್ರತಾ ವ್ಯವಸ್ಥೆ ಬಗ್ಗೆ ಅಧ್ಯಯನ ಮಾಡಿದ್ದಾನೆ ಎಂದು ವರದಿ ತಿಳಿಸಿದೆ.
ಸುದೀರ್ಘ ಅಧ್ಯಯನ ಮಾಡಿದ ಮನೋರಂಜನ್ ದಾಳಿ ನಡೆಸಲು ಸ್ಕೆಚ್ ರೂಪಿಸಿ ಮತ್ತೆ ಪಾಸ್ ನೀಡುವಂತೆ ಮನವಿ ಮಾಡಿದ್ದಾನೆ. ಈ ವೇಳೆ ಪಾಸ್ ನೀಡಲು ಪ್ರತಾಪ್ ಸಿಂಹ ಕಚೇರಿ ನಿರಾಕರಿಸಿದೆ. ಪದೇ ಪದೇ ಪಾಸ್ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಲಾಗಿತ್ತು.
ಬಳಿಕ ಮೈಸೂರಿನ ಆಪ್ತ ಸಹಾಯಕರ ಮೂಲಕ ಒತ್ತಡ ಹೇರಿ ದೆಹಲಿಯಲ್ಲಿರುವ ಪ್ರತಾಪ್ ಸಿಂಹರ ಕಚೇರಿಯಿಂದ ಪಾಸ್ ಪಡೆದಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ ಎನ್ನಲಾಗಿದೆ.