ನ್ಯೂಸ್ ನಾಟೌಟ್ : ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 2023-2024 ನೇ ಸಾಲಿನ ಪ್ರಥಮ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ )ಅಧ್ಯಕ್ಷ ಡಾ.ಕೆ. ವಿ. ಚಿದಾನಂದ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡುತ್ತಾ ವಿದ್ಯಾಭ್ಯಾಸದ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಆಯುರ್ವೇದ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿದ್ದು, ವಿಶ್ವದಾದ್ಯಂತ ಆಯುರ್ವೇದ ಔಷಧ ಮತ್ತು ವೈದ್ಯರಿಗೂ ಮಾನ್ಯತೆ ಇದೆ. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ ಮತ್ತು ನವೀನ ವೈದ್ಯಕೀಯ ಪದ್ಧತಿಗಳನ್ನು ಸಮಯೋಚಿತವಾಗಿ ಬಳಸಿಕೊಂಡು ರೋಗಿಗಳ ಕ್ಷೇಮಕ್ಕಾಗಿ ಇರುವ ವಿಪುಲ ಅವಕಾಶಗಳು ಹಾಗೂ ಈ ನಿಟ್ಟಿನಲ್ಲಿ ಸಾಗುವ ದಾರಿದೀಪದ ಹಿತವಚನವನ್ನು ತಿಳಿಸಿ ಕೊಟ್ಟರು.
ಬಳಿಕ ಮುಖ್ಯ ಅತಿಥಿಯಾಗಿ ಬೆಂಗಳೂರು ಸಿ.ಐ.ಡಿ. ಪೊಲೀಸ್ ಇನ್ಸ್ಪೆಕ್ಟರ್ ಬ್ರಿಜೇಶ್ ಮ್ಯಾಥ್ಯೂ ಮಾತನಾಡಿ “ವಿದ್ಯಾರ್ಥಿಗಳಲ್ಲಿ ಇರಬೇಕಾದ ಸಂಯಮ, ಶಿಸ್ತು ಮತ್ತು ದಕ್ಷತೆಯ ಅಗತ್ಯತೆಯನ್ನು ವಿವರಿಸಿದರು. ರ್ಯಾಗಿಂಗ್ ಹಾಗೂ ಮಾದಕ ದ್ರವ್ಯ ವ್ಯಸನದ ಬಗ್ಗೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ ಡಿ.ವಿ.ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ” ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸದ ಪ್ರಾಮುಖ್ಯತೆ ಹಾಗೂ ಕಾಲೇಜಿನ ನಿಯಮಗಳನ್ನು ವಿವರಿಸಿದರು. ವಿದ್ಯಾರ್ಥಿ ಜೀವನದ ಮಹತ್ವದ ಬಗ್ಗೆ ತಿಳಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.ಈ ವೇಳೆ ಕಾಲೇಜಿನ ತ್ರೈಮಾಸಿಕ ಪತ್ರಿಕೆ “ಆಯುರ್ ನ್ಯೂಸ್-ಸಂಸ್ಕಾರವನ್ನು” ಡಾ. ಚಿದಾನಂದ ಕೆ. ವಿ. ಇವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿ ಡಾ. ಓಂ. ಈರಪ್ಪ ಎಲಿಗಾರ್,ಕಾಲೇಜಿನ ವಿದಾರ್ಥಿ ಸಂಘದ ಅಧ್ಯಕ್ಷ ಆರ್ಥಿಕ್ ಕೆ. ಎಸ್., ವಿದ್ಯಾರ್ಥಿಗಳ ಪೋಷಕರು, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ.ಸ್ವಾಗತಿಸಿ, ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿ ಡಾ. ಓಂ ಈರಪ್ಪ ಎಲಿಗಾರ್ ವಂದಿಸಿದರು. ವಿದ್ಯಾರ್ಥಿಗಳಾದ ಶ್ರೀವಿದ್ಯಾ, ದಿಲ್ನ ಹಾಗೂ ವಿಸ್ಮಯ ಪ್ರಾರ್ಥಿಸಿ, ಕುಮಾರಿ ದೀಕ್ಷಾ ಮತ್ತು ಕೃತಿಕ ಕಾರ್ಯಕ್ರಮವನ್ನ ನಿರೂಪಿಸಿದರು.