ಕ್ರೀಡೆಕ್ರೀಡೆ/ಸಿನಿಮಾದೇಶ-ವಿದೇಶ

2024 ರ ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಗೆದ್ದ ಭಾರತದ 18 ವರ್ಷದ ಗುಕೇಶ್, ಚೆಸ್ ಇತಿಹಾಸದಲ್ಲಿ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆ

ನ್ಯೂಸ್ ನಾಟೌಟ್: ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಕೊನೆಯ ಹಾಗೂ 14ನೇ ಗೇಮ್​ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ ಶಿಪ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ಈ ರೋಚಕ ಹಣಾಹಣಿಯಲ್ಲಿ ಕಳೆದ ಬಾರಿಯ ಚಾಂಪಿಯನ್ ಚೀನಾದ ಡಿಂಗ್ ಲಿರೆನ್​ಗೆ ಚೆಕ್ ಮೇಟ್ ನೀಡಿದ ಗುಕೇಶ್, ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಹದಿನೈದು ದಿನಗಳ ಕಾಲ ನಡೆದ ಈ ವಿಶ್ವ ಚೆಸ್ ಪಂದ್ಯಾವಳಿಯಲ್ಲಿ ಉಭಯ ಆಟಗಾರರು ಪ್ರಬಲ ಪೈಪೋಟಿ ನೀಡಿದರು. ಹೀಗಾಗಿ ಇದಕ್ಕೂ ಮುನ್ನ ಆಡಿದ 13 ಸುತ್ತುಗಳಲ್ಲಿ ಇಬ್ಬರೂ ತಲಾ 2 ಪಂದ್ಯ ಗೆದ್ದಿದ್ದರೆ, ಉಳಿದ 9 ಪಂದ್ಯಗಳು ಡ್ರಾ ಆಗಿದ್ದವು. ಆದ್ದರಿಂದ ಇಬ್ಬರ ಬಳಿಯೂ ತಲಾ 6.5 ಅಂಕಗಳಿದ್ದವು. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ನಿರ್ಣಾಯಕವಾಗಿತ್ತು. ಒಂದು ವೇಳೆ ಈ ಪಂದ್ಯವೂ ಡ್ರಾ ಆಗಿದ್ದರೆ ಇಬ್ಬರೂ ತಲಾ 7 ಅಂಕ ಗಳಿಸಿ ಟೈಬ್ರೇಕರ್ ಮೂಲಕ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಆದರೆ ಇದಕ್ಕೆ ಅವಕಾಶ ನೀಡಿದ ಗುಕೇಶ್ ಅಂತಿಮವಾಗಿ 7.5- 6.5 ಅಂಕಗಳ ಅಂತರದಿಂದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

Related posts

ಹೆಲ್ಮೆಟ್ ಇಲ್ಲದೇ ಸಂಚರಿಸಿದ ಬಾಲಿವುಡ್ ನ ಖ್ಯಾತ ತಾರೆಯರು:ಅಮಿತಾಬ್ ಬಚ್ಚನ್ , ಅನುಷ್ಕಾ ಶರ್ಮಾ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸ್!

ತಮಿಳ್ ʼತುನಿವುʼ ಸಿನಿಮಾದಿಂದ ಪ್ರೇರಣೆಗೊಂಡ ವಿದ್ಯಾರ್ಥಿ, ಬೆದರಿಸಿ ಬ್ಯಾಂಕ್ ದರೋಡೆಗೆ ಯತ್ನ ! ರೋಚಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Pro Kabaddi Season 10: ಮತ್ತೆ ಬರುತ್ತಿದೆ ಅಭಿಮಾನಿಗಳ ನೆಚ್ಚಿನ ಪ್ರೊ ಕಬಡ್ಡಿ, ಆಟಗಾರರ ಹರಾಜು ಪ್ರಕ್ರಿಯೆಗೆ ಪರಿಷ್ಕೃತ ದಿನಾಂಕ ಪ್ರಕಟ