ನ್ಯೂಸ್ ನಾಟೌಟ್ : ಕ್ಷೀರಭಾಗ್ಯ ಯೋಜನೆಯಲ್ಲಿ ನೀಡಲಾಗ್ತಿದ್ದ ಹಾಲಿನಲ್ಲಿ ಹಲ್ಲಿ ಬಿದ್ದ ಹಿನ್ನೆಲೆಯಲ್ಲಿ ಸರ್ಕಾರಿ ಕನ್ನಡ ಶಾಲೆಯ 30 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದಲ್ಲಿ ಈ ಘಟನೆ ವರದಿಯಾಗಿದ್ದು,ಸಂಕೇಶ್ವರ ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ಶಾಲಾ ಸಿಬ್ಬಂದಿ ದಾಖಲಿಸಿದ್ದಾರೆ.ಮಕ್ಕಳು ಹಾಲು ಕುಡಿದ ಮೇಲೆ ಹಾಲಿನಲ್ಲಿ ಹಲ್ಲಿ ಬಿದ್ದಿರುವುದು ತಿಳಿದುಬಂದಿದೆ.ಮುಂಜಾಗ್ರತಾ ಕ್ರಮವಾಗಿ ಸಂಕೇಶ್ವರ ಆಸ್ಪತ್ರೆಗೆ 30 ಮಕ್ಕಳನ್ನು ದಾಖಲು ಮಾಡಲಾಗಿದೆ.
ಯಾವುದೇ ಮಕ್ಕಳ ಅರೋಗ್ಯದಲ್ಲಿ ಏರುಪೇರಾಗಿಲ್ಲ.ಹುಕ್ಕೇರಿ ಬಿಇಒ ಪ್ರತಿಭಾ ಪಾಟೀಲ್ ಈ ಮಾಹಿತಿ ನೀಡಿದ್ದಾರೆ.