ನ್ಯೂಸ್ ನಾಟೌಟ್ : 5 ವರ್ಷದ ಮಗುವೊಂದು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ಭಾನುವಾರ(ಜ.21 ರಂದು) ನಡೆದಿದೆ.
ಮಗು ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್ ನಲ್ಲಿ ಕಾರ್ಟೂನ್ ವೀಕ್ಷಿಸುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದೆ. ಆ ಬಳಿಕ ಮಗು ಪ್ರಜ್ಞಾಹೀನವಾಗಿತ್ತು ಎನ್ನಲಾಗಿದೆ.
ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಮಗು ಆದಾಗಲೇ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
“ಮಗು ಹೃದಯಾಘಾತದಿಂದ ಸಾವನ್ನಪ್ಪಿರಬಹುದು” ಎಂದು ಹಸನಪುರ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಹೇಳಿದ್ದಾರೆ.
“ಶವವನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸುವಂತೆ ನಾವು ಕುಟುಂಬಕ್ಕೆ ಮನವಿ ಮಾಡಿದ್ದೇವೆ. ಆದರೆ ಅವರು ಒಪ್ಪಲಿಲ್ಲ. ಮಗು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತನಿಖೆಯ ವಿಷಯವಾಗಿದೆ” ಎಂದು ಅಮ್ರೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಮಾಹಿತಿ ನೀಡಿರುವುದಾರೆ.