ನ್ಯೂಸ್ ನಾಟೌಟ್: ಗ್ರಾಮೀಣ ಭಾಗದ ಮಕ್ಕಳಲ್ಲಿ ಕನ್ನಡ ಕಲಿಕೆಯ ಆಸಕ್ತಿ ಬೆಳೆಸುವಂತೆ ಮಾಡಿ ಸುಳ್ಯದ ಹಸಿರ ಪರಿಸರದಲ್ಲಿ ವಿಭಿನ್ನ ಶೈಲಿಯಲ್ಲಿ ಶಿಕ್ಷಣ ದಾಸೋಹವನ್ನೇ ಉಣ ಬಡಿಸುತ್ತಿರುವ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಶ್ವೇತ ಪಡೆಯು ವಿಶೇಷವಾಗಿ ಸ್ವಚ್ಛತೆಯ ಜಾಗೃತಿ ಅಭಿಯಾನವನ್ನು ಕೈಗೊಂಡು ಜನರ ಮನಗೆದ್ದಿದ್ದಾರೆ.
ಸುಳ್ಯ ಚೆನ್ನಕೇಶವ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಈ ಶಾಲೆಯ ಮಕ್ಕಳ ಶ್ವೇತ ಪಡೆಯು ಈ ವಿಭಿನ್ನ ಅಭಿಯಾನವನ್ನು ಕೈಗೊಂಡರು.ಜಾತ್ರೆಗೆ ಆಗಮಿಸಿದ ಭಕ್ತರಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದೆ ಕಸದ ತೊಟ್ಟಿಯಲ್ಲಿ ಹಾಕುವಂತೆ ಸೂಚಿಸುವ ಮೂಲಕ ಜನರಲ್ಲಿ ಸ್ವಚ್ಚತೆಯ ಅರಿವು ಮೂಡಿಸಿದ್ದಾರೆ.ವಿದ್ಯಾರ್ಥಿಗಳ ಈ ಕಾಳಜಿಯ ಕಾರ್ಯಕ್ಕೆ ಭಾರಿ ಶ್ಲಾಘನೆಯೂ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ , ಶಾಲೆಯ ಸಂಚಾಲಕ ಚಂದ್ರಶೇಖರ ದಾಮ್ಲೆ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ದಾಮ್ಲೆ ಹಾಗೂ ಶಿಕ್ಷಕ ದೇವಿ ಪ್ರಸಾದ್ ಕಾಯರ್ತೋಡಿ ಮತ್ತಿತರರು ಉಪಸ್ಥಿತರಿದ್ದರು.