ನ್ಯೂಸ್ ನಾಟೌಟ್: ರನ್ವೇಯಲ್ಲಿ ಲ್ಯಾಂಡ್ ಆಗುತ್ತಿದ್ದಾಗ ವಿಮಾನವೊಂದು ಹೊತ್ತಿ ಉರಿದ ಘಟನೆ ಜಪಾನಿನ (Japan) ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಈ ವಿಮಾನದಲ್ಲಿ ಒಟ್ಟು 387 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ. ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದೆ.
JAL 516 ಹೆಸರಿನ ವಿಮಾನ ಹೊಕ್ಕೈಡೊದಿಂದ ಟೇಕಾಫ್ ಆಗಿತ್ತು. ಕೋಸ್ಟ್ ಗಾರ್ಡ್ ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆಯ ಕಾರಣವು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ಜಪಾನ್ ಟೆಲಿವಿಷನ್ ವರದಿಗಳು ಏರ್ಬಸ್ ಕೋಸ್ಟ್ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿದ್ದು, ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.
ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ ಸುಮಾರು 367 ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗಿದೆ. ಪ್ರತಿಕ್ರಿಯೆಗೆ ಅಧಿಕಾರಿಗಳು ತಕ್ಷಣ ಲಭ್ಯವಾಗಿಲ್ಲ ಎನ್ನಲಾಗಿದೆ.