ನ್ಯೂಸ್ ನಾಟೌಟ್ : ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಪ್ರತಿಯೊಬ್ಬರೂ ಕಾತರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಜೈಲಿನಲ್ಲಿರುವ ಕೈದಿಗಳಿಗೂ ಅಯೋಧ್ಯೆ ಮಂತ್ರಾಕ್ಷತೆ, ರಾಮ ಚರಿತ್ರೆ ಪುಸ್ತಕ ವಿತರಣೆಯ ಕಾರ್ಯ ನಡೆಸಲಾಯಿತು.
ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜನಾರ್ದನ ಪ್ರತಿಷ್ಠಾನದಿಂದ ಹಮ್ಮಿಕೊಳ್ಳಲಾಗಿದ್ದ ಧಾರ್ಮಿಕ ಆಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಕಾರಾಗೃಹದಲ್ಲಿರುವ ಕೈದಿಗಳಿಗೆ ಮಂತ್ರಾಕ್ಷತೆ, ಜಪಮಾಲೆ, ಪುಸ್ತಕ ವಿತರಣೆಯನ್ನು ಜ.೨೦ ರಂದು ನಡೆಸಿದರು.
ಜನಾರ್ದನ ದೇಗುಲದ ಅರ್ಚಕ ಅನಂತಪ್ರಸಾದ ಕೈದಿಗಳಿಗೆ ರಾಮತಾರಕ ಮಂತ್ರಗಳನ್ನು ಹೇಳಿಕೊಟ್ಟು ನಿತ್ಯವೂ ಪಠಿಸುವಂತೆ ಮನವಿ ಮಾಡಿದರು ಎನ್ನಲಾಗಿದೆ.
ಅಯೋಧ್ಯೆ ರಾಮಮಂದಿರದ ಕ್ರಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಜಿನ ಮುಡಿಗುಂಡಂ ವಿರಕ್ತ ಮಠದ ಶ್ರೀಕಂಠ ಸ್ವಾಮೀಜಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಇಂದು (ಶುಕ್ರವಾರ) ಅಧಿಕೃತ ಆಹ್ವಾನ ಸಿಕ್ಕಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.