ಬಿಜೆಪಿ, ಸಂಘ ಪರಿವಾರ ಕರಾವಳಿಯಂತೆ ಮಂಡ್ಯದಲ್ಲೂ ಪ್ರಯೋಗ ಶಾಲೆ ಆರಂಭಿಸಿದೆ ಎಂದ ಪ್ರಿಯಾಂಕ್ ಖರ್ಗೆ, ಸಚಿವ ಹೇಳಿದ ಆ 4 ಅಂಶಗಳು ಯಾವುವು..?

ನ್ಯೂಸ್ ನಾಟೌಟ್: ಇಷ್ಟು ದಿನ ಕರಾವಳಿಯನ್ನು ಕೋ* ಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ (BJP) ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ. ಮಂಡ್ಯದಲ್ಲಿ (Mandya Hanuma Dhwaja) ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್.ಅಶೋಕ್ ಅವರೇ ಹಾಗೂ ಬಿವೈ ವಿಜಯೇಂದ್ರ ಈ ಅಂಶಗಳು ನಿಮ್ಮ ಗಮನಕ್ಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.ಪ್ರಿಯಾಂಕ್ ಖರ್ಗೆ ಹೇಳಿದ 4 ಅಂಶಗಳು ಹೀಗಿವೆ, *29/12/2023 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ.*17/01/2024ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ.*18/01/2024ರಂದು ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ. ಬಿವೈ ವಿಜಯೇಂದ್ರ ಮತ್ತು ಆರ್.ಅಶೋಕ್ ಅವರೇ ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈಗ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದೆ.