ನ್ಯೂಸ್ ನಾಟೌಟ್: ಕರಾವಳಿಯ ಹಿಂದೂ ಹೋರಾಟಗಾರರ ಗಡಿಪಾರು ಮಾಡುವ ಪ್ರಕ್ರಿಯೆಗೆ ಸರ್ಕಾರ ಮತ್ತೊಮ್ಮೆ ಕೈ ಹಾಕಿದೆ. ಇದೀಗ ಪುತ್ತೂರಿನ ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಾಳೆ (ಬುಧವಾರ) ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಅವಿನಾಶ್ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಆಗಿದ್ದಾರೆ. ಅವಿನಾಶ್ ಒಂದು ವೇಳೆ ನಾಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಗೆ ಗಡಿಪಾರು ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಹಾಯಕ ಆಯುಕ್ತರ ಕಚೇರಿ ನೋಟಿಸ್ ಜಾರಿ ಮಾಡಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮುಖಂಡ ಅವಿನಾಶ್ ಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಗಡಿಪಾರು ನೋಟಿಸ್ ಜಾರಿ ಆಗಿದೆ.