ನ್ಯೂಸ್ ನಾಟೌಟ್ : ತಂದೆ -ಮಗಳ ಸಂಬಂಧಕ್ಕೆ ಬೆಲೆ ಕಟ್ಟಲಸಾಧ್ಯ.ಮಗಳಿಗೆ ಒಂಚೂರು ನೋವಾದ್ರೂ ತಂದೆ ಮಾತ್ರ ಅದನ್ನು ಸಹಿಸೋದಿಲ್ಲ.ಇಂತಹ ಸಂದರ್ಭದಲ್ಲಿ ಇಲ್ಲೊಬ್ಬ ಕಾಮುಕ ತಂದೆ ತನ್ನ ಬುದ್ಧಿಮಾಂದ್ಯ ಮಗಳ (Daughter) ಮೇಲೆಯೇ ಎರಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣ ಮಗು ಜನಿಸಿದ ಬಳಿಕ ಬೆಳಕಿಗೆ ಬಂದಿದೆ. ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೆಳವಟ್ಟಿ (Belavatti) ಗ್ರಾಮದಿಂದ ವರದಿಯಾಗಿದೆ.
ತಾಲೂಕಿನ ಬೆಳವಟ್ಟಿ ಗ್ರಾಮದಲ್ಲಿ ತಾಯಿ ಇಲ್ಲದ ಮಾನಸಿಕ ಅಸ್ವಸ್ಥ ಮಗಳೊಂದಿಗೆ ಮನೆಯಲ್ಲಿ ಆಕೆಯ ತಂದೆಯೇ ಈ ಕೃತ್ಯ ಎಸಗಿದ್ದು,ಆಕೆ ಗರ್ಭಿಣಿಯಾಗಿರುವ ಬಗ್ಗೆ ಸ್ಥಳೀಯರಿಂದ ಅನುಮಾನ ವ್ಯಕ್ತವಾಗಿದೆ.ಬಳಿಕ ಗ್ರಾಮದ ಆಶಾ ಕಾರ್ಯಕರ್ತೆಯರ ಮೂಲಕ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ಮಾಹಿತಿ ದೃಢಪಟ್ಟಿದೆ.
ಸರ್ಕಾರೇತರ ಸಂಸ್ಥೆಯೊಂದು 2023ರ ಫೆಬ್ರವರಿ ತಿಂಗಳಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಬುದ್ಧಿಮಾಂದ್ಯೆಯ ತಂದೆ ಮೇಲೆ ಅನುಮಾನಗೊಂಡು ತಂದೆ ಹಾಗೂ ಆಕೆಗೆ ಜನಿಸಿದ ಮಗುವಿನ ಡಿಎನ್ಎ ಪರೀಕ್ಷಿಸಿದ ಬಳಿಕ ಆತನೇ ಮಗುವಿನ ತಂದೆ ಎನ್ನುವುದು ದೃಢಪಟ್ಟಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು, ಬುದ್ಧಿಮಾಂದ್ಯೆಯ ಮೇಲೆ ಈ ಕೃತ್ಯವೆಸಗಲಾಗಿದೆ ಎಂದು ಎನ್.ಜಿ.ಒ ದೂರು ನೀಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆಕೆಯ ತಂದೆಯೇ ಕೃತ್ಯ ಎಸಗಿರುವುದು ತಿಳಿದು ಬಂದಿದೆ. ಈ ಕುರಿತು ಸಂಬಂಧಿಸಿದ ನ್ಯಾಯಾಲಯಕ್ಕೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ತಿಳಿಸಿದರು.