ನ್ಯೂಸ್ ನಾಟೌಟ್: 16 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಲಖ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ವರದಿಯಾಗಿದ್ದು, ಮೃತರನ್ನು 61 ವರ್ಷದ ರಾಮ್ ಅಸರೆ ಕುಶ್ವಾಹ ಎಂದು ಗುರುತಿಸಲಾಗಿದೆ.
ಕೊಲೆಯಾದ ವೃದ್ಧನಿಗೆ 7 ಜನ ಹೆಣ್ಣು ಮಕ್ಕಳಿದ್ದು, ಸದ್ಯ, ಮೃತ ರಾಮ್ ಅಸರಾ ಕುಶ್ವಾಹ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
೧6ರ ಹರೆಯದ ಬಾಲಕಿ ಆಕೆ ಗರ್ಭಿಣಿ ಎಂದು ತಿಳಿದು ಬಂದಿದೆ. ಇದಕ್ಕೆ ಯಾರು ಹೊಣೆ ಎಂದು ಕೇಳಿದಾಗ 61ರ ಹರೆಯದ ವ್ಯಕ್ತಿಯ ಹೆಸರನ್ನು ಹೇಳಿದ್ದಾಳೆ. ಇದರಿಂದ ಕುಪಿತಗೊಂಡ ಬಾಲಕಿಯ ತಂದೆ ವೃದ್ಧನ ಮೇಲೆ ಕೊಡಲಿಯಿಂದ ಗಂಭೀರವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.
ಕೋಪದಿಂದ ಸಂತ್ರಸ್ತೆಯ ತಂದೆ, ಮುದುಕನ ಕುತ್ತಿಗೆಗೆ ಕೊಡಲಿಯನ್ನು ಹಾಕಿ ಕತ್ತರಿಸಿದರು. ನಂತರ ಆ ವ್ಯಕ್ತಿ ತೀವ್ರವಾಗಿ ಗಾಯಗೊಂಡರು. ಬಳಿಕ, ಅವರನ್ನು ಝಾನ್ಸಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತಾದರೂ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಝಾನ್ಸಿ ಮೆಡಿಕಲ್ ಕಾಲೇಜ್ ನಲ್ಲಿ ಮೃತ ವೃದ್ಧನ ಶವದ ಮರಣೋತ್ತರ ಪರೀಕ್ಷೆ ನಡೆಸಿ ಪೊಲೀಸರ ಮುಂದೆ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ. ಮೃತ ರಾಮ್ ಅಸರೆ ಕುಶ್ವಾಹ ಹಮೀರ್ಪುರದ ಜಲಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂಲಿವಾಸಾ ಗ್ರಾಮದ ನಿವಾಸಿಯಾಗಿದ್ದರು. ಈತ ಕೃಷಿ ಕೆಲಸ ಮಾಡುತ್ತಿದ್ದ ಬಗ್ಗೆ ತಿಳಿದುಬಂದಿದೆ.
ರಾಮ್ ಆಸರೆ ರಿಗೆ 8 ಹೆಣ್ಣು ಮಕ್ಕಳಿದ್ದಾರೆ. ಅವರಲ್ಲಿ 6 ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಇಬ್ಬರು ಹೆಣ್ಣು ಮಕ್ಕಳು ಇನ್ನೂ ಮದುವೆಯಾಗಿಲ್ಲ. ಕೊಲೆ ಮಾಡಿದ ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿಲ್ಲ ಎಂದೂ ಕುಟುಂಬಸ್ಥರು ದೂರಿದ್ದಾರೆ.