ನ್ಯೂಸ್ ನಾಟೌಟ್:ಅಯೋಧ್ಯೆಯಲ್ಲಿ ಸಂಭ್ರಮ ಮನೆ ಮಾಡಿದ್ದು,ರಾಮ ಭಕ್ತರು ರಾಮಲಲ್ಲಾ ಮೂರ್ತಿಯನ್ನು ಕಂಡು ಪುಳಕಿತರಾಗಿದ್ದಾರೆ. ನಿನ್ನೆ (ಸೋಮವಾರ ಜ.22) ಅಯೋಧ್ಯೆಯಲ್ಲಿ ನಡೆದ ಅದ್ದೂರಿ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಬಳಿಕ ಇಂದು ಅಯೋಧ್ಯೆಯತ್ತ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.ಇದೀಗ ಪ್ರಾರ್ಥನೆ ಸಲ್ಲಿಸಲು ದೇವಾಲಯದ ಮುಖ್ಯದ್ವಾರದಲ್ಲಿ ಭಾರೀ ಭಕ್ತರು ಆಗಮಿಸಿದ್ದಾರೆ. ಭಕ್ತಿಪೂರ್ವಕ ನಮನ ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಭೇಟಿ ಕೊಡುತ್ತಿದ್ದಾರೆ.
ಪ್ರಾಣ ಪ್ರತಿಷ್ಠಾ ಸಮಾರಂಭದ ಬಳಿಕ ಮೊದಲ ದಿನವಾದ ಇಂದು ಬೆಳಗ್ಗೆ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀರಾಮಲಲ್ಲಾನ ದರ್ಶನ ಪಡೆಯಲು ನಾ ಮುಂದು ತಾ ಮುಂದು ಎಂದು ನೂಕುನುಗ್ಗಲು ಮಾಡಿದ್ದಾರೆ. ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಅಯೋಧ್ಯೆಯ ಭವ್ಯ ರಾಮಮಂದಿರ ಇಂದಿನಿಂದ ಸಾರ್ವಜನಿಕರಿಗೆ ತೆರದಿದ್ದು, ಈ ವಿಷಯ ತಿಳಿದ ಭಕ್ತಾಧಿಗಳು ಇದೀಗ ತಮ್ಮ ಕುಟುಂಬ ಸಮೇತ ದೇವಾಲಯಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ.ಅಯೋಧ್ಯೆ ರಾಮಮಂದಿರಕ್ಕೆ ದೇಶ-ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿರುವುದು ಮತ್ತಷ್ಟು ವಿಶೇಷವೆಂದೆನಿಸಿಕೊಂಡಿದೆ.