ಹಾಸ್ಟೆಲ್‌ನದ್ದ ಅಪ್ರಾಪ್ತೆಗೆ ಗಂಡು ಮಗು..! ಓದುತ್ತಲೇ ತಾಯಿಯಾದ 9ನೇ ತರಗತಿ ವಿದ್ಯಾರ್ಥಿನಿ! ಇಲ್ಲಿದೆ ಸಂಪೂರ್ಣ ಕಹಾನಿ

ನ್ಯೂಸ್ ನಾಟೌಟ್ : ಹಾಸ್ಟೆಲ್ ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತುಮಕೂರು ಜಿಲ್ಲೆಯಲ್ಲಿ ವರದಿಯಾಗಿದೆ. ಅಪ್ರಾಪ್ತ ವಯಸ್ಸಿನಲ್ಲಿ ವಿದ್ಯಾರ್ಥಿನಿಯ ಮೇಲೆ ಯಾರು ಬಲ* ತ್ಕಾರ ಮಾಡಿದ್ದಾರೆ ಎಂಬುದೇ ಬಯಲಾಗಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಹೆರಿಗೆಯಾಗಿದೆ, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆಗ ಬಂದು ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದಾಗ ಆಕೆ, 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಆದರೆ, ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಯಾರು ಬಲ* ತ್ಕಾರ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಠಾಣೆಯ ಪೊಲೀಸರಿಂದ ಪೋಕ್ಸೋ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಇನ್ನು ವಿದ್ಯಾರ್ಥಿನಿ ತುಮಕೂರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೀಗಾಗಿ, ಬಾಗೇಪಲ್ಲಿ ಪೊಲೀಸ್‌ ಠಾಣೆಯಿಂದ ತುಮಕೂರು ನಗರ ಪೊಲೀಸ್‌ ಠಾಣೆಗೆ ಪೋಕ್ಸೋ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ಅಪ್ರಾಪ್ತ ಬಾಲಕಿಯನ್ನು ಕೃತ್ಯ ಮಾಡಿದ ಆರೋಪಿ ಯಾರೆಂಬುದರ ಚಿಂತೆಯಾಗಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ