ನ್ಯೂಸ್ ನಾಟೌಟ್ : ಜೆಟ್ ಲ್ಯಾಗ್ ಎಂಬ ಪಬ್ನಲ್ಲಿ ದರ್ಶನ್, ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು ಇದು ಕಾನೂನಿಗೆ ಬಾಹಿರವಾಗಿತ್ತು ಮತ್ತು ಈ ಬಗ್ಗೆ ಜನಾಕ್ರೋಶ ವ್ಯಕ್ತವಾಗಿತ್ತು ಜೊತೆಗೆ ಈ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್ ಜಾರಿ ಆಗಿದೆ. ಸುಬ್ರಹ್ಮಣ್ಯನಗರ ಇನ್ಸ್ಪೆಕ್ಟರ್ ಸುರೇಶ್ ಅವರಿಂದ ಮೂವರಿಗೂ ನೋಟಿಸ್ ಜಾರಿ ಆಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್ಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ 3ರಂದು ರಾತ್ರಿ ಪಬ್ಗೆ ಇವರು ಬೆಳಗಿನಜಾವದವರೆಗೆ ಪಾರ್ಟಿ ಮಾಡಿದ್ದರು.
ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ ಎಂದು ದೂರಲಾಗಿದೆ.ಈಗಾಗಲೇ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಅಭಿಷೇಕ್ ಅಂಬರೀಷ್ಗೆ ನೋಟಿಸ್ ತಲುಪಿದೆ. ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ಡೈರಕ್ಟರ್ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ. ಸದ್ಯ ಚಿತ್ರತಂಡ ವಿದೇಶದಲ್ಲಿದೆ ಎನ್ನಲಾಗಿದೆ.