- +91 73497 60202
- [email protected]
- November 24, 2024 4:24 PM
ಕರ್ನಾಟಕದಲ್ಲಿ 2024ರ ಮೊದಲ ಭೂಕಂಪ..! ರಾತ್ರೋರಾತ್ರಿ ಕಂಪಿಸಿದ ಭೂಮಿ
ನ್ಯೂಸ್ ನಾಟೌಟ್ :2024 ರಲ್ಲಿ ಮೊದಲ ಬಾರಿಗೆ ಗುರುವಾರ(ಜ.25) ರಾತ್ರಿ ವಿಜಯಪುರ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ವಿಜಯಪುರದ ಬಸವನಬಾಗೇವಾಡಿ ತಾಲೂಕಿನ ಮನಗೂಳಿ, ಯರನಾಳ ಗ್ರಾಮ ಪಂಚಾಯಿತಿ ಸಮೀಪದ ಹತ್ತರಕಿಹಾಳ, ನಂದಿಹಾಳ, ವಿಜಯಪುರ ಭಾಗದ ವ್ಯಾಪ್ತಿಯಲ್ಲಿ 2.6 ತೀವ್ರತೆಯ ಭೂಕಂಪನ (Vijayapura Earthquake) ಸಂಭವಿಸಿದೆ ಎಂದು ವರದಿ ತಿಳಿಸಿದೆ. ಭೂಮಿಯ 2 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಮಿ ನಡುಗುವ ಅನುಭವ ಆಗುತ್ತಲೇ ಮನೆಗಳ ಗೋಡೆಗಳಿಗೆ ಹಾಕಿದ್ದ ಪಾತ್ರೆಗಳು ಸೇರಿದಂತೆ ಇತರೆ ವಸ್ತುಗಳು ಚದುರಿ ಸದ್ದು ಮಾಡಿವೆ. ಇದರಿಂದಾಗಿ ಮನೆಗಳಲ್ಲಿ ಟಿ.ವಿ. ನೋಡುತ್ತಿದ್ದ ಊಟ ಮಾಡುತ್ತಿದ್ದ, ವಿಶ್ರಾಂತಿಯಲ್ಲಿದ್ದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಿರುವುದು ಜಿಲ್ಲೆಯ ಜನತೆಗೆ ಭಯಹುಟ್ಟಿಸುತ್ತಿದೆ. ಜಿಲ್ಲೆಯಲ್ಲಿ ಗುರುವಾರ (ಜನವರಿ 25) ಲಘು ಭೂಕಂಪನ ಆಗಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢೀಕರಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.ವಿಜಯಪುರದ ಉಕುಮನಾಳ ಗ್ರಾಮದಲ್ಲಿ 2023ರ ಡಿಸೆಂಬರ್ 8ರ ಶುಕ್ರವಾರ ಬೆಳಗ್ಗೆ 6.52ಕ್ಕೆ ಭೂಂಕನಪದ ಅನುಭವವಾಗಿತ್ತು ಎಂದು ವರದಿ ತಿಳಿಸಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ