ನ್ಯೂಸ್ ನಾಟೌಟ್ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಡೀನಾ ಪೆಮ್ಮಯ್ಯ (27) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ. ನೆಲಜಿ ಗ್ರಾಮದ ನಿವಾಸಿ ಮುಂಡಂಡ ಪ್ರಭು ಪೆಮ್ಮಯ್ಯ ಅವರ ಪತ್ನಿ ಇವರಾಗಿದ್ದು, ಶನಿವಾರ ತನ್ನ 9 ವರ್ಷದ ಹೆಣ್ಣು ಮಗುವನ್ನು ತವರು ಮನೆಯಲ್ಲಿ ಬಿಟ್ಟು ನೆಲಜಿ ಗ್ರಾಮದಲ್ಲಿರುವ ಗಂಡನ ಮನೆಯಲ್ಲಿ ಯಾರೂ ಇಲ್ಲದ ಸಮಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕಾಗಮಿಸಿದ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಡೆತ್ನೋಟ್ ಸಿಕ್ಕಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಕ್ರೈಂ ಪಿಎಸ್ಐ ಶ್ರೀಧರ, ಮಹಿಳಾ ಸಿಬ್ಬಂದಿ ಪೂರ್ಣಿಮ, ಚಾಲಕ ಷರೀಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ಡೀನಾ ಪೆಮ್ಮಯ್ಯ ಅವರ ತಂದೆ ಪೂಣಚ್ಚ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.