ನ್ಯೂಸ್ ನಾಟೌಟ್: ಒಂದೇ ದಿನ 8 ಮಂದಿಯಲ್ಲಿ ಮಂಗನ ಕಾಯಿಲೆ ಇರುವುದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಪತ್ತೆಯಾಗಿದೆ.
ಮಂಗನಕಾಯಿಲೆ ಪತ್ತೆಯಾಗಿದ್ದು, ಈ ಮೂಲಕ ಕಳೆದ 10 ದಿನದಲ್ಲಿ ಕೆಎಫ್ಡಿ ಪ್ರಕರಣ 16ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
10 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
KFDV ವೈರಾಣು ಇರುವ ಉಣ್ಣಿ ಅಥವಾ ಉಣುಗು (Ticks) ಕಚ್ಚಿದಾಗ ರೋಗಕಾರಕ ವೈರಸ್ಗಳನ್ನು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ರೋಗಗ್ರಸ್ತ ಉಣ್ಣೆಗಳು ಮಾನವನನ್ನು ಕಚ್ಚುವುದರಿಂದ ಆಕಸ್ಮಿಕವಾಗಿ ಮಾನವನಿಗೆ ಸೋಂಕು ತಗಲುತ್ತದೆ ಎನ್ನಲಾಗಿದೆ.
ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿ 7 ಪ್ರಕರಣ ಉಳಿದಂತೆ ಇತರೆ ಭಾಗದಲ್ಲಿ 9 ಒಟ್ಟು ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ ಎನ್ನಲಾಗಿದೆ.