- +91 73497 60202
- [email protected]
- November 25, 2024 11:49 AM
ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ನಿರಂತರವಾಗಿ ಇಳಿಕೆ ಕಾಣುತ್ತಿದೆ ಎನ್ನಲಾಗಿದೆ. ಮೈಕೊರೆಯುವ ಚಳಿಯ ಜೊತೆಗೆ ಬಿರುಸಾದ ಮಂಜಿನ ಪ್ರಮಾಣವೂ ಹೆಚ್ಚುತ್ತಿದ್ದು, ಭಾರೀ ಹವಾಮಾನ ವೈಪರೀತ್ಯದಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ ಎ. ಮಂಜು ಮುಸುಕಿದ ಕಾರಣ ರೈಲು, ರಸ್ತೆ ಹಾಗೂ ವಿಮಾನ ಸಂಚಾರಕ್ಕೂ ತೊಂದರೆಯಾಗಿದೆ. ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಗಣಿಸಿ, ಶಾಲೆಗಳನ್ನು ಮುಚ್ಚುವ ಮತ್ತು ತೆರೆಯುವ ಬಗ್ಗೆ ನಿರಂತರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲೌನ್‌ನ ಜಿಲ್ಲಾಧಿಕಾರಿ ಈ ಹಿಂದೆ ಶಾಲೆಗಳನ್ನು ಮುಚ್ಚುವಂತೆ ಆದೇಶ ನೀಡಿದ್ದರು. ಇದೀಗ ಜಿಲ್ಲಾ ಶಿಕ್ಷಣ ಇಲಾಖೆಯಿಂದ ಹೊಸ ಆದೇಶ ಹೊರಡಿಸಲಾಗಿದೆ. ಜಲೌನ್ ಜಿಲ್ಲೆಯಲ್ಲಿ ನರ್ಸರಿಯಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಮುಚ್ಚುವಂತೆ ಜಲೌನ್‌ನ ಡಿಎಂ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ಸೂಚನೆಯ ನಂತರ ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದ್ದು, ಅದರನ್ವಯ 8 ನೇ ತರಗತಿಯವರೆಗಿನ ಶಾಲೆಗಳು ಜನವರಿ 6, 2024 ರವರೆಗೆ ಮುಚ್ಚಲ್ಪಡುತ್ತವೆ. ಜಿಲ್ಲಾ ಶಾಲಾ ನಿರೀಕ್ಷಕರು ಹೊರಡಿಸಿರುವ ಆದೇಶದಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಮದರಸಾಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ. 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಜನವರಿ 6ರವರೆಗೆ ಶಾಲೆಗಳಲ್ಲಿ ಬೋಧನಾ ಕಾರ್ಯವನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದ್ದು ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ನಿಗದಿತ ದಿನಾಂಕದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಶಾಲಾ ನಿರೀಕ್ಷಕರು ತಿಳಿಸಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ