- +91 73497 60202
- [email protected]
- November 26, 2024 1:34 AM
ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ವಿರುದ್ಧ ಸಾಲು-ಸಾಲು ಎಫ್‌ಐಆರ್! ದೂರಿನಲ್ಲೇನಿದೆ..?
ನ್ಯೂಸ್ ನಾಟೌಟ್: ಸಾಮಾಜಿಕ ಜಾಲತಾಣದಲ್ಲಿ ಜನಾಂಗೀಯ ದ್ವೇಷ, ಕೋಮುಗಲಭೆಗೆ ಯತ್ನ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಸೈಬರ್ ಕ್ರೈಂಗೆ ದೂರು ದಾಖಲು ಮಾಡಲಾಗಿದೆ. ರಾಷ್ಟ್ರರಕ್ಷಣಾ ಪಡೆ ವಾಟ್ಸಪ್ ಗ್ರುಪ್‌ನಲ್ಲಿ ಹರಿದಾಡುತ್ತಿರುವ ಗಲಭೆ ಸೃಷ್ಟಿಸುವ ಸಂದೇಶ. ಜನಾಂಗೀಯ ದ್ವೇಷ ಬಿತ್ತಿ. ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದಾನೆಂದು ಆರೋಪ ಮಾಡಲಾಗಿದೆ. ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ನಮಗೆ ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಪ್ರಿಪೇರ್ ಆಗಿರಿ. ಎಲ್ಲಿ ಏನು ಮಾಡಬೇಕು ಎಂಬುದು ನಾವು ಈ ಗ್ರುಪ್‌ನಲ್ಲಿ ಮಾಹಿತಿ ಕೊಡುತ್ತಾ ಇರುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ.. 2024ಕ್ಕೆ ಮತ್ತೊಮ್ಮೆ ಮೋದಿ ಎಂದು ಬರೆದು ಶೇರ್ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ಹಾಕಿರುವ ನಂಬರ್ ಅನ್ನು ಟ್ರೂ ಕಾಲರ್ ಹಾಕಿದಾಗ ಪುನೀತ್ ಕೆರೆಹಳ್ಳಿ ನಂಬರ್ ಎಂದು ತಿಳಿದುಬಂದಿದೆ. ಹೀಗಾಗಿ ಜನಾಂಗೀಯ ದ್ವೇಷ ಹುಟ್ಟಿಸುವ ಈತನನ್ನ ಕೂಡಲೇ ಬಂಧಿಸಿ ತನಿಖೆಗೊಳಪಡಿಸಬೇಕು. ಅದ್ಯಾವ ಬಿಜೆಪಿ ಮುಖಂಡ ಈತನಿಗೆ ಸುಪಾರಿ ಕೊಟ್ಟಿದ್ದಾನೆಂದು ತನಿಖೆ ಆಗಬೇಕು. ಕೂಡಲೆ ಕ್ರಮ ಆಗಬೇಕೆಂದು ದೂರಿನಲ್ಲಿ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇದು ಸೇರಿದಂತೆ ಈ ಹಿಂದೆ ಇತ್ತೀಚೆಗೆ ಮಾಲ್ ಆಫ್ ಏಷ್ಯಾ ಶಾಪಿಂಗ್ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿದ್ದಲ್ಲದೇ, ಸಿಬ್ಬಂದಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿ ಎಫ್‌ಐಆರ್ ದಾಖಲಾಗಿತ್ತು. ಈತನ ವಿರುದ್ಧ ಕಳೆದ ವರ್ಷ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ