ಶ್ರೀ ರಾಮನ ಶೋಭಯಾತ್ರೆ ವೇಳೆ ಕಲ್ಲು ತೂರಾಟ..! ಅಶ್ರುವಾಯು ಸಿಡಿಸಿದ ಪೊಲೀಸರು, ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಗುಜರಾತ್‌ನ ಮೆಹ್ಸಾನ ಜಿಲ್ಲೆಯಲ್ಲಿ ನಡೆಯುತ್ತಿದ್ದ ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಿದ ಘಟನೆ ಜ.೨೧ರಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಭಗವಾನ್ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ.ಶಾಂತಿಯುತವಾಗಿ ಸಾಗುತ್ತಿದ್ದ ಶೋಭಯಾತ್ರೆ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಎರಡು ಅಶ್ರುವಾಯು ಸಿಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೇರಾಲು ಪಟ್ಟಣದಲ್ಲಿ ಶ್ರೀರಾಮನ ಶೋಭಯಾತ್ರೆ ಸಾಗುತ್ತಿತ್ತು. ಅನ್ಯ ಸಮುದಾಯದ ಮನೆ ಹಾಗೂ ಪ್ರಾರ್ಥನಾ ಕೇಂದ್ರಗಳು ಇದ್ದ ಸ್ಥಳದ ಸಮೀಪ ಬರುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಶೋಭಯಾತ್ರೆಗೆ ಪೊಲೀಸರ ಭದ್ರತೆ ನೀಡಿದ್ದರು. ಆದರೆ ಏಕಾಏಕಿ ಕಲ್ಲು ತೂರಾಟದಿಂದ ಪರಿಸ್ಥಿತಿ ಗಂಭೀರವಾಗಿದೆ. ಇತ್ತ ಶೋಭಯಾತ್ರೆಯ ರಾಮ ಭಕ್ತರು ಕೆರಳಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮೊದಲು ಪೊಲೀಸರು ಅಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ ಎನ್ನಲಾಗಿದೆ. ಸಂಪೂರ್ಣ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಇತ್ತ ಶೋಭಯಾತ್ರೆ ಅರ್ಧಕ್ಕೆ ಮೊಟಕುಗೊಂಡಿದೆ.