- +91 73497 60202
- [email protected]
- November 22, 2024 6:31 PM
ನ್ಯೂಸ್ ನಾಟೌಟ್ : ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಅದ್ದೂರಿ ತಯಾರಿ ನಡೆಯುತ್ತಿದ್ದು, ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವದ ಕೋಟ್ಯಾನು ಕೋಟಿ ಮಂದಿ ಕಾತುರರಾಗಿದ್ದು, ಅವರಿಗೆ ಬೇಕಾದ ವ್ಯವಸ್ಥೆಯನ್ನು ಮಾಡಲಾಗತ್ತಿದೆ. ಉತ್ತರ ಪ್ರದೇಶದ (Uttar Pradesh) ಎಲ್ಲಾ ಜೈಲುಗಳಲ್ಲಿಯೂ ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಸಮಾರಂಭದ ನೇರಪ್ರಸಾರ ಮಾಡಲಾಗುವುದು ಎಂದು ಸಚಿವ ಧರ್ಮವೀರ್ ಪ್ರಜಾಪತಿ ತಿಳಿಸಿದ್ದಾರೆ. ಕೈದಿಗಳು ಸಹ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುತ್ತದೆ. ಸದ್ಯ ರಾಜ್ಯದಲ್ಲಿ 1.05 ಲಕ್ಷಕ್ಕೂ ಹೆಚ್ಚು ಕೈದಿಗಳಿದ್ದಾರೆ. ಅವರೂ ಈ ದೇಶದ ಪ್ರಜೆಗಳು. ಅವರು ಈ ಸಂದರ್ಭದಿಂದ ದೂರ ಉಳಿಯದಂತೆ ನೋಡಿಕೊಳ್ಳಲು, ರಾಜ್ಯದ ಎಲ್ಲಾ ಜೈಲುಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕ ನ್ಯೂಯಾರ್ಕ್ ನಗರದ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ (Times Square)ನೇರಪ್ರಸಾರ ಮಾಡಲಿದೆ. ಜೊತೆಗೆ ಅಮೆರಿಕದಲ್ಲಿರುವ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ನೇರಪ್ರಸಾರ ಮಾಡುವ ಮೂಲಕ ಅಮೆರಿಕದಲ್ಲೂ ಶ್ರೀರಾಮನ ದರ್ಶನವಾಗಲಿದೆ. ಅಯೋಧ್ಯೆಯಲ್ಲಿ (Ayodhya) ಶ್ರೀರಾಮನ ಪ್ರತಿಷ್ಠಾಪನೆಗೆ ಸಾಕ್ಷಿಯಾಗುವ 51 ದೇಶಗಳನ್ನು ಗುರುತಿಸಲಾಗಿದೆ. ಈ ಪೈಕಿ ಥೈಲ್ಯಾಂಡ್ ಸಹ ಒಂದಾಗಿದ್ದು, ಇಲ್ಲಿನ ರಾಜಧಾನಿ ಬ್ಯಾಂಕಾಕ್‌ನಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ಶ್ರೀಮಂತ ಹಿಂದೂ ಸಾಂಸ್ಕೃತಿಕ ಪರಂಪರೆಗೆ ನೆಲೆಯಾಗಿದೆ. ಭಾರತ ಮತ್ತು ಥೈಲ್ಯಾಂಡ್ ಬಲವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಬಂಧಗಳನ್ನು ಹೊಂದಿವೆ. ಥೈಲ್ಯಾಂಡ್‌ನ ಹಲವಾರು ರಾಜರು ರಾಮನ ವಂಶಸ್ಥರ ಭಾಗವಾಗಿದ್ದಾರೆ ಎಂದೇ ಹೇಳಲಾಗುತ್ತದೆ. ಇಲ್ಲಿರುವ ಪ್ರತಿಯೊಬ್ಬ ರಾಜನಿಗೂ ಹೆಸರಿನಲ್ಲಿ ರಾಮನ ಬಿರುದು ಇದೆ, ಇದು ಇಲ್ಲಿನ ಹಳೆಯ ಸಂಪ್ರದಾಯವಾಗಿದೆ ಎಂದು ವಿಶ್ವ ಹಿಂದೂ ಫೌಂಡೇಶನ್ ಸ್ಥಾಪಕ ಮತ್ತು ಜಾಗತಿಕ ಅಧ್ಯಕ್ಷರಾದ ಸ್ವಾಮಿ ವಿಜ್ಞಾನಾನಂದ ಮಾಹಿತಿ ನೀಡಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ