ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆಗೆ ಆದೇಶ, ಏನಿದು ಹೊಸ ನಿಯಮ..?

ನ್ಯೂಸ್ ನಾಟೌಟ್: ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸರಸ್ವತಿ ಮೂರ್ತಿಯನ್ನು ಕಡ್ಡಾಯವಾಗಿ ಪ್ರತಿಷ್ಠಾಪಿಸುವಂತೆ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಶಾಲೆಯ ಮುಖ್ಯದ್ವಾರದಲ್ಲಿ ಈ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಸರಸ್ವತಿಯ ಭಾವಚಿತ್ರ ಅಥವಾ ಮೂರ್ತಿ ಇಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಗೆ ಶಾಲೆಗಳಲ್ಲಿ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ವಯಸ್ಸು ಮತ್ತು ಲಿಂಗವನ್ನು ಆಧರಿಸಿ ವಸ್ತ್ರ ಸಂಹಿತೆ ನಿರ್ಧರಿಸಲಾಗುತ್ತದೆ. ಇನ್ನು ಶಾಲೆಗಳಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹೇಳಿಕೆ ನೀಡಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆತ್ತು, ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಒತ್ತಾಯಿಸಿದ್ದಾರೆ ಎನ್ನಲಾಗಿದೆ.