ನ್ಯೂಸ್ ನಾಟೌಟ್: ಶ್ರೀರಾಮನ ಪ್ರಾಣಪ್ರತಿಷ್ಠೆ ದಿನ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ ಮತ್ತು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಉದ್ಘಾಟನೆ ಆಗಲಿದ್ದು, ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ.
“ಭಾರತ ಹಿಂದೂ ರಾಷ್ಟ್ರ, ರಾಜ್ಯದಲ್ಲಿ ಆರೂವರೆ ಕೋಟಿ ಹಿಂದೂಗಳಿದ್ದಾರೆ. ರಾಜ್ಯದ ಜನರ ಭಾವನೆಯ ಜೊತೆ ಚೆಲ್ಲಾಟ ಆಡಬಾರದು. ಮನವಿಯನ್ನು ಒಪ್ಪಿಕೊಂಡು ರಜೆ ಸಾರಿದರೆ ಉತ್ತಮ. ಇಲ್ಲದಿದ್ದರೆ ಸ್ಥಳೀಯವಾಗಿ ರಜೆಯ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ.
ಸಿದ್ದರಾಮಯ್ಯನವರಿಗೆ ಯಾವುದು ಸರಿ ಯಾವುದು ತಪ್ಪು ಎಂದು ಗೊತ್ತಿದೆ. ಸಿದ್ದರಾಮಯ್ಯ ನಿವೃತ್ತಿ ಅಂಚಿನಲ್ಲಿದ್ದಾರೆ. ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ತಿಳಿಸಿದರು. ಜನವರಿ 4 ಭೇಟಿಯಾಗಿ ಶಿಕ್ಷಣ ಸಚಿವರು ಸಿಎಂ ಇಬ್ಬರಿಗೆ ಮನವಿ ಮಾಡುತ್ತೇನೆ” ಎಂದು ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಸಿದ್ದರಾಮಯ್ಯನವರ ಕುಟುಂಬ ಹೆಂಡತಿ, ಮಕ್ಕಳು ಧಾರ್ಮಿಕ ಕಾರ್ಯಕ್ರಮದಲ್ಲಿ ಉಡುಪಿ ಕೃಷ್ಣಮಠ-ಮಂದಿರಗಳಿಗೆ ಹೋಗುತ್ತಾರೆ. ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹೀಗೆ ವರ್ತಿಸುತ್ತಿದ್ದಾರೆ. ರಾಮಮಂದಿರ ನಿರ್ಮಾಣ ಆಗುತ್ತಿರುವುದು ಸಿದ್ದರಾಮಯ್ಯ ಮನಸ್ಸಿನಲ್ಲಿ ಬಹಳ ಖುಷಿ ಇದೆ ಎಂದಿದ್ದಾರೆ.