ನ್ಯೂಸ್ ನಾಟೌಟ್ : ಅಯೋಧ್ಯೆಯ ಶ್ರೀ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭಗೊಂಡಿದೆ.ಹೀಗಾಗಿ ಭರದ ಸಿದ್ಧತೆಗಳು ನಡಿತಿದ್ದು,ಕೆಲವರು ಸ್ವಯಂಪ್ರೇರಿತರಾಗಿ ಬಂದು ಅವರದ್ದೇ ಆದ ಕೊಡುಗೆಗಗಳನ್ನು ನೀಡುತ್ತಿದ್ದಾರೆ.
ಇದೀಗ ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್ನ (Gujarat) ಸೂರತ್ (Surat) ನಗರದಲ್ಲಿ ಅಯೋಧ್ಯೆಯಲ್ಲಿ (Ayodhya) ನೆಲೆಸಿರುವ ಸೀತಾಮಾತೆಗೆ (Sita Mata) ಅರ್ಪಿಸಲು ವಿಶೇಷ ಸೀರೆಯೊಂದನ್ನು (Saree) ಸಿದ್ಧ ಪಡಿಸಿದ್ದಾರೆ. ಈ ಸೀರೆಯನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ (Ram Mandir) ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಳುಹಿಸಲಾಗುವುದು ಎಂದು ಜವಳಿ ಉದ್ಯಮಿ ಲಲಿತ್ ಶರ್ಮಾ (Lalith Sharma)ತಿಳಿಸಿದ್ದಾರೆ.
ಸೀತಾಮಾತೆಗೆಂದು ತಯಾರಿಸಿರುವ ಈ ವಿಭಿನ್ನ ಸೀರೆಯಲ್ಲಿ ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆಯ ದೇವಾಲಯದ ಮುದ್ರಣವಿದೆ. ಸೀರೆ ತಯಾರಿಯ ಮೊದಲ ಕಚ್ಚಾ ವಸ್ತುವಿನ ತುಣುಕನ್ನು ಸೂರತ್ನ ಸೀತಾ ದೇವಿಯ ದೇವಾಲಯಕ್ಕೆ ಅರ್ಪಿಸಲಾಗಿದೆ.ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭೌತಿಕವಾಗಿ ಇರಲು ಸಾಧ್ಯವಾಗದ ಭಕ್ತರು ತಮ್ಮದೇ ಆದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಂಪರ್ಕ ಸಾಧಿಸಲು ಬಯಸಿದ ಕಾರಣ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಲಲಿತ್ ಶರ್ಮ ಹೇಳಿದ್ದಾರೆ.
ಸೀರೆಯಲ್ಲಿ ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆ ದೇವಸ್ಥಾನವನ್ನು ಮುದ್ರಿಸಿರುವುದನ್ನು ನೀವು ಕಾಣಬಹುದಾಗಿದೆ. ಅದನ್ನು ಇಲ್ಲಿ ನೆಲೆಸಿರುವ ಸೀತಾಮಾತೆಯ ದೇವಸ್ಥಾನಕ್ಕೆ ಅರ್ಪಿಸಲಾಗಿದೆ. ಬಳಿಕ ಈ ಸೀರೆಯನ್ನು ಅಯೋಧ್ಯೆಯ ರಾಮಮಂದಿರಕ್ಕೆ ಕಳುಹಿಸಿಕೊಡಲಾಗುತ್ತದೆ. ಬೇಡಿಕೆ ಬಂದರೆ ಸೀತಾಮಾತೆ ನೆಲೆಸಿರುವ ಎಲ್ಲಾ ರಾಮನ ದೇವಾಲಯಗಳಿಗೆ ಅದನ್ನು ಉಚಿತವಾಗಿ ಕಳುಹಿಸುವ ವ್ಯವಸ್ಥೆಗೂ ಬದ್ಧವೆಂದು ಎಂದು ಶರ್ಮಾ ತಿಳಿಸಿದ್ದಾರೆ.