- +91 73497 60202
- [email protected]
- September 20, 2024 11:22 AM
ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ..! ಬಿಬಿಎ ವ್ಯಾಸಂಗ ಮಾಡುತ್ತಿದ್ದಾಕೆಗೆ ಏನಾಯ್ತು..?
ನ್ಯೂಸ್ ನಾಟೌಟ್: ಯುವತಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸ ವರ್ಷವೇ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು (Police) ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಆಕೆಯ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆಯಾ ಎನ್ನುವುದು ತಿಳಿದುಬಂದಿಲ್ಲ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ