ನ್ಯೂಸ್ ನಾಟೌಟ್: ಕ್ಲರಿಕಲ್ ಹುದ್ದೆಗಳಿಗಾಗಿ ಕರ್ನಾಟಕ ಬ್ಯಾಂಕ್ ಆಯೋಜಿಸಿದ್ದ ಲಿಖಿತ ಪರೀಕ್ಷೆಯಲ್ಲಿ IRCMD ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪುತ್ತೂರಿನ ಮಹೇಶ್ ಕೆ.ಎಂ ಹಾಗೂ ಸುಳ್ಯದ ಶ್ರೀವತ್ಸ ಭಾರದ್ವಾಜ್ ಉದ್ಯೋಗಕ್ಕೆ ಆಯ್ಕೆಯಾಗಿರುವ IRCMD ವಿದ್ಯಾರ್ಥಿಗಳಾಗಿದ್ದಾರೆ.
ಪ್ರತಿಷ್ಠಿತ ‘ಕರ್ನಾಟಕ ಎಜುಕೇಷನಲ್ ಅವಾರ್ಡ್’ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ನೀಡುತ್ತಿದೆ. ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾಗಿರುವುದು ವಿಶೇಷ. ಪ್ರತಿ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯುವುದು ಈ ಶಿಕ್ಷಣ ಸಂಸ್ಥೆಯ ವೃತ್ತಿಪರತೆಗೆ ಹಿಡಿದ ಸಾಕ್ಷಿಯಾಗಿದೆ. ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಯನ್ನು ಉದ್ಯೋಗಾಕಾಂಕ್ಷಿಗಳಿಗೂ ಮೆಸೇಜುಗಳ ಮೂಲಕ IRCMD ತಲುಪಿಸುತ್ತದೆ. ಪ್ರತಿದಿನದ ಹಾಗೂ ವಾರಾಂತ್ಯದ ಬ್ಯಾಚುಗಳು ಲಭ್ಯವಿದ್ದು (ಆನ್ ಲೈನ್/ ಆಫ್ ಲೈನ್) ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ IRCMD ಶಿಕ್ಷಣ ಸಂಸ್ಥೆಯ ದೂರವಾಣಿ ಸಂಖ್ಯೆ 9632320477 / 9945988118 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.