ನ್ಯೂಸ್ ನಾಟೌಟ್ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.19 ರಂದು ಬ್ರಹ್ಮರಥೋತ್ಸವ ವೈಭವದಿಂದ ನಡೆಯಲಿದೆ.
ಬೆಳಗ್ಗೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ 12 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ,ಪ್ರಸಾದ ವಿತರಣೆ ನಡೆದಿದ್ದು, ರಾತ್ರಿ 7ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ,ವ್ಯಾಘ್ರಚಾಮುಂಡಿ ದೈವ(ಪಿಲಿಭೂತ) ದ ಭಂಡಾರ ಬರುವುದು,ಬಳಿಕ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ ನಡೆಯಲಿದೆ. ಆ ಬಳಿಕ ಮಹಾಪೂಜೆ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.ಈ ಸಂದರ್ಭ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.