ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ಸ್ವಾಮಿ ವಿವೇಕಾನಂದರ ಬಗ್ಗೆ ಮಾತನಾಡಿದರು. ಅವರ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಂಡರೆ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಿಥಾಲಿ ಪಿ.ರೈ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.