ನ್ಯೂಸ್ ನಾಟೌಟ್: ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯ ಸುಳ್ಯ ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಡಿಬೇಟ್ ಸ್ಪರ್ಧೆಯಲ್ಲಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೆಡರಲ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ವಿಜಯ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿಜೇತರಾಗಿ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಇದೀಗ ಅವರು ಮುಂದಿನ ಕರ್ನಾಟಕ ಝೋನಲ್ ಮಟ್ಟಕ್ಕೆ ಆಯ್ಕೆಯಾಗಿದ್ದು ಹೆಮ್ಮೆಯ ವಿಷಯಾಗಿದೆ. ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯ ಸುಳ್ಯ ಇದರ ವಿದ್ಯಾರ್ಥಿಗಳಾದ ಮಹಮ್ಮದ್ ರಾಫೀ, ಮಹಮ್ಮದ್ ಮುಸ್ತಫ, ಹುಸೈದ್ ಇವರು ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ.