- +91 73497 60202
- [email protected]
- November 22, 2024 11:12 PM
ದೇವಾಲಯದ ಆವರಣದಲ್ಲೇ ಮಾಂಸಾಹಾರ ಸೇವನೆ ..! ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂದು ಫಲಕ ಅಳವಡಿಸಲು ಹೈ ಕೋರ್ಟ್ ಸೂಚನೆ
ನ್ಯೂಸ್ ನಾಟೌಟ್: ದೇವಸ್ಥಾನಗಳಲ್ಲಿ ಧಾರ್ಮಿಕ ಆಚರಣೆಗಳಿಗೆ ಲೋಪವಾಗುವಂತೆ ವರ್ತಿಸಿದರ ಬಗ್ಗೆ ಕೋರ್ಟ್ ಎಚ್ಚರಿಕೆ ನೀಡಿದ್ದು, ಮರುಕಳಿಸಿದರೆ ಕಠಿಣ ಕ್ರಮಕ್ಕೆ ಸೂಚಿಸಿದೆ. ಹಿಂದೂ ದೇವಾಲಯಗಳಿಗೆ ಹಿಂದೂಯೇತರು ಪ್ರವೇಶಿಸಿ ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಮದ್ರಾಸ್ ಹೈಕೋರ್ಟ್ ಕಿಡಿಕಾರಿದ್ದು, ಈ ಘಟನೆ ಚೆನ್ನೈನಲ್ಲಿ ನಡೆದಿದೆ ಮತ್ತು ಇದು ಪಿಕ್ನಿಕ್ ಸ್ಪಾಟ್ ಅಲ್ಲ ಎಂದು ಕೋರ್ಟ್ ಎಚ್ಚರಿಸಿದೆ ಎಂದು ವರದಿ ತಿಳಿಸಿದೆ. ದೇಗುಲಗಳಲ್ಲಿರುವ ‘ಕೋಡಿಮರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆಗೆ ನಿರ್ದೇಶನ ನೀಡಿದೆ. ಹಿಂದೂಗಳು ಕೂಡ ವೃತ್ತಿ ಮತ್ತು ಧಾರ್ಮಿಕ ಅಭ್ಯಾಸ ಮಾಡುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಲಾಗಿದೆ. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ‘ಕೋಡಿಮಾರಂ ನಂತರ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ. ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡಬಾರದು. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಗಳಿಗೆ ಭೇಟಿ ನೀಡುವುದಾದರೆ, ಒಂದಷ್ಟು ಒಪ್ಪಂದಗಳನ್ನು ಮಾಡಿಕೊಳ್ಳಬೇಕು. ದೇವರಲ್ಲಿ ನಂಬಿಕೆ ಮತ್ತು ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅನುಸರಿಸುತ್ತಾರೆಯೇ? ದೇವಾಲಯದ ಪದ್ಧತಿಗಳಿಗೆ ಬದ್ಧರಾಗುತ್ತಾರೆಯೇ? ಅಂತಹ ಕಾರ್ಯದಲ್ಲಿ ಹಿಂದೂಯೇತರರು ದೇವಾಲಯಕ್ಕೆ ಭೇಟಿ ನೀಡುವುದಾದರೆ ಅನುಮತಿ ಕೊಡಬಹುದು ಎಂದು ಕೋರ್ಟ್ ಹೇಳಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ