ನ್ಯೂಸ್ ನಾಟೌಟ್: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಇಂದು (ಫೆ.28) ಬೆಳಿಗ್ಗೆ ಭುವನೇಶ್ವರದ ಕೊಳೆಗೇರಿ ಪ್ರದೇಶಗಳಿಗೆ ಭೇಟಿ ನೀಡಿದ್ದು, ಅಲ್ಲಿನ ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದು ವಿಶೇಷವಾಗಿತ್ತು.
ಬೆಂಗಳೂರಿನ ‘ಮಾ ಮಂಗಳ ಬಸ್ತಿ’ಯಲ್ಲಿರುವ ಬಿಜು ಆದರ್ಶ್ ಕಾಲೊನಿಗೆ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು, ಸ್ಥಳೀಯರ ಯೋಗ ಕ್ಷೇಮ ವಿಚಾರಿಸಿ ಅಲ್ಲಿನ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಇದೇ ವೇಳೆ ಮಾತನಾಡಿದ ರಾಜ್ಯ ಅಭಿವೃದ್ಧಿ ಆಯುಕ್ತೆ ಅನುಗಾರ್ಗ್, ‘ಕೊಳೆಗೇರಿ ನಿವಾಸಿಗಳಿಗೆ ಭೂಮಿಯ ಹಕ್ಕು, ನಲ್ಲಿ ನೀರಿನ ಸಂಪರ್ಕ, ಶೌಚಾಲಯ ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೊಳಚೆ ಪ್ರದೇಶವನ್ನು ಮಾದರಿ ಕಾಲೊನಿಯಾಗಿ ಪರಿವರ್ತಿಸಲಾಗಿದೆ‘ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಯೋಜನೆಗಳಿಂದ ನಮ್ಮ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಬಿಲ್ ಗೇಟ್ಸ್ ವಿಚಾರಿಸಿದ್ದಾರೆ.
ಬಿಲ್ ಗೇಟ್ಸ್ ಇಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಒಡಿಶಾ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ‘ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್’ ಕೆಲಸ ಮಾಡುತ್ತಿದೆ.