ನ್ಯೂಸ್ ನಾಟೌಟ್ : ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕನ ತಲೆಗೆ ಗಾಯವಾಗಿರುವ ಘಟನೆ ಕಲ್ಲುಗುಂಡಿ ಸಮೀಪದ ಕೈಪಡ್ಕ ರಸ್ತೆ ಬಳಿ ಸಂಭವಿಸಿದೆ.ಆಟೋ ಚಾಲಕನನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಮಡಿಕೇರಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಕಲ್ಲುಗುಂಡಿ ಕಡೆಯಿಂದ ಬರುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ.ಡಿಕ್ಕಿಯಾದ ರಭಸಕ್ಕೆ ಕಾರು ಜಖಂಗೊಂಡಿದ್ದು, ರಿಕ್ಷಾ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದು ಬಂದಿದೆ. ಚಾಲಕ ಸುರೇಶ್ ದೊಡ್ಡಡ್ಕ ಅವರ ತಲೆಗೆ ಗಾಯವಾಗಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯರು ಆಗಮಿಸಿ ರಿಕ್ಷಾ ಚಾಲಕನನ್ನು ಸುಳ್ಯ ಆಸ್ಪತ್ರೆಗೆ ಕರೆ ತಂದರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.