ನ್ಯೂಸ್ ನಾಟೌಟ್ : ಸದಾ ಕ್ರೀಯಾಶೀಲತೆಯಿಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Congress leader Priyanka Gandhi Vadra) ಅವರಿಗೆ ಇದೀಗ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದೆ. ಸದ್ಯ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸ್ವತಃ ಪ್ರಿಯಾಂಕಾ ಗಾಂಧಿ ಅವರೇ ಈ ವಿಷಯವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಾವು ಅನಾರೋಗ್ಯದಿಂದ (Illness) ಆಸ್ಪತ್ರೆಗೆ ದಾಖಲಾಗಿರುವುದಾಗಿ ಬಹಿರಂಗಪಡಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ. ಆದರೆ ಅವರಿಗೆ ಏನಾಗಿದೆ ಎಂಬುದನ್ನು ಪ್ರಿಯಾಂಕಾ ಗಾಂಧಿ ಇನ್ನೂ ಬಹಿರಂಗಪಡಿಸಿಲ್ಲ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದೆ.ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸಬೇಕಾಗಿತ್ತು, ಆದರೆ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನಾನು ಯಾತ್ರೆಯನ್ನು ಸ್ವಾಗತಿಸಲು ಮತ್ತು ಅದರಲ್ಲಿ ಭಾಗವಹಿಸಲು ತುಂಬಾ ಉತ್ಸುಕಳಾಗಿದ್ದೆ.ಆದರೆ ದುರದೃಷ್ಟವಶಾತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಅನಾರೋಗ್ಯ ಕಡಿಮೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ರಾಹುಲ್ ಗಾಂಧಿ ಅವರ ಪ್ರವಾಸಕ್ಕೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.