ಡಿಡಿ ಚಂದನದಲ್ಲಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ,80 -90 ರ ದಶಕದ ಧಾರವಾಹಿಯ ಪ್ರಸಾರ ದಿನಾಂಕ ಘೋಷಣೆ

ನ್ಯೂಸ್ ನಾಟೌಟ್: ಮೂರು ದಶಕಗಳ ಹಿಂದೆ ರಮನಾಂದ ಸಾಗರ್‌ ನಿರ್ದೇಶನದಲ್ಲಿ ಮೂಡಿಬಂದಿದ್ದ ಮತ್ತು ದೇಶದೆಲ್ಲೆಡೆ ಸಂಚಲನ ಸೃಷ್ಠಿಸಿದ್ದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಮತ್ತೆ ಮರು ಪ್ರಸಾರ ಫೆಬ್ರವರಿ 5ರಿಂದ ಮತ್ತೆ ಪ್ರಸಾರ ಮಾಡುತ್ತಿದೆ. ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ. ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ… ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ‘ರಾಮಾಯಣ’ ಬರಲಿದೆ ಎಂದು ಡಿಡಿ ನ್ಯಾಷನಲ್‌ ಎಕ್ಸ್‌ ನಲ್ಲಿ ತಿಳಿಸಿದೆ. 80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಾಲಿಯಾ ಮತ್ತು ಸಹೋದರ ಲಕ್ಷ್ಮಣನಾಗಿ ಸುನಿಲ್ ಲಹ್ರಿ ಕಾಣಿಸಿಕೊಂಡಿದ್ದಾರೆ. ದೇಶದಾದ್ಯಂತ ಜನಮನ್ನಣೆಯನ್ನೂ ಈ ಧಾರಾವಾಹಿ ಗಳಿಸಿತ್ತು. ಕೊರೊನಾ ಲಾಕ್‌ಡೌನ್‌ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು. ಆಗಲೂ ಲಕ್ಷಾಂತರ ಜನರು ವೀಕ್ಷಿಸಿ ಜನಪ್ರಿಯತೆ ಪಡೆದುಕೊಂಡಿತ್ತು.