ನ್ಯೂಸ್ ನಾಟೌಟ್: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿತ್ತು ಇದಾದ ಬಳಿಕ ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಗುತ್ತಿದೆ.
ಮದ್ರಾಸ್ ಜಿಲ್ಲಾ ನ್ಯಾಯಾಲಯ ಸ್ವಚ್ಚತೆ ಮತ್ತು ಸುವ್ಯವಸ್ಥೆ ಕಾಪಾಡಲು ೭ ದಿನ ಅವಕಾಶ ನೀಡಿತ್ತು ಈ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ಥ್ ಮೂಲಕ ಪೂಜೆ ನಡೆಸಲಾಗುತ್ತಿದೆ.
ನ್ಯಾಯಾಲಯದ ಆದೇಶದ ಬಳಿಕ ಪೂಜೆಗೆ ಸಿದ್ಧತೆಗಳನ್ನು ಮಾಡಲಾಯಿತು ಅಲ್ಲದೆ ಪೂಜೆಯ ವೇಳೆಗೆ ಜ್ಞಾನವಾಪಿಯಾ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಯಿತು.
ಈ ಎಲ್ಲಾ ಬೆಳವಣಿಗೆಯನ್ನು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಸಾಮಾಜಿಕ ಜಾಲತಾಣದಲ್ಲಿ “ನ್ಯಾಯಾಲಯದ ಆದೇಶಗಳನ್ನು ಪಾಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜ್ಞಾನವಾಪಿ ಆವರಣದ ಸರ್ವೆ ವೇಳೆ ದೊರೆತ ಮೂರ್ತಿಗಳನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿ, ಬಳಿಕ ಅರ್ಚಕರು ವಿಗ್ರಹಗಳಿಗೆ ಶಯನ ಆರತಿ ಮಾಡಿದ್ದಾರೆ. ಮುಂಭಾಗದಲ್ಲಿ ಅಖಂಡ ಜ್ಯೋತಿ ಬೆಳಗಲಾಯಿತು. ಈ ವೇಳೆ ಜ್ಞಾನವಾಪಿಯ ಸುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು ಎಂದು ಬರೆದುಕೊಂಡಿದ್ದಾರೆ.
ಗುರುವಾರದಿಂದ, ಜ್ಞಾನವಾಪಿ ಸಂಕೀರ್ಣದಲ್ಲಿ ಯಥಾ ಪ್ರಕಾರ ಪೂಜೆ, ಮಂಗಳಾರತಿ ನಡೆಯಲಿದೆ ಎಂದು ವರದಿ ತಿಳಿಸಿದೆ.