ನ್ಯೂಸ್ ನಾಟೌಟ್ : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ (HD Devegowda) ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು (ಫೆ.೧೫) ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ. ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.
ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಚ್ಡಿ ದೇವೇಗೌಡಗೆ 90 ವರ್ಷ ವಯಸ್ಸಾಗಿದ್ದು, ಆದರೂ ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.
ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು ಎನ್ನಲಾಗಿದೆ.